Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಸ್ವಾಮಿಯ ಖಡ್ಗವು ರಕ್ತಮಯವಾಗಿದೆ; ಅದು ಕೊಬ್ಬಿನಿಂದಲೂ ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡಗಳ ವಪೆಯಿಂದಲೂ ತುಂಬಿದೆ; ಸರ್ವೇಶ್ವರ ಬೊಚ್ರದಲ್ಲಿ ಈ ಬಲಿಯನ್ನೂ ಎದೋಮಿನಲ್ಲಿ ಈ ದೊಡ್ಡ ಸಂಹಾರವನ್ನೂ ಮಾಡಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನ ಖಡ್ಗವು ರಕ್ತಮಯವಾಗಿದೆ; ಅದು ವಪೆಯಿಂದಲೂ ಕುರಿ ಹೋತಗಳ ರಕ್ತದಿಂದಲೂ ಟಗರುಗಳ ಹುರುಳಿಕಾಯಿಗಳ ಕೊಬ್ಬಿನಿಂದಲೂ ಭರಿತವಾಗಿದೆ; ಯೆಹೋವನು ಬೊಚ್ರದಲ್ಲಿ ಬಲಿಯನ್ನೂ ಎದೋಮ್ ಸೀಮೆಯಲ್ಲಿ ದೊಡ್ಡ ಕೊಲೆಯನ್ನೂ ಮಾಡಬೇಕೆಂದಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ಬೊಚ್ರದಲ್ಲಿ ಮತ್ತು ಎದೋಮಿನಲ್ಲಿ ಕೊಲ್ಲುವ ಸಮಯವನ್ನು ನಿರ್ಧರಿಸಿರುತ್ತಾನೆ. ಯೆಹೋವನ ಖಡ್ಗವು ವಪೆಯಿಂದಲೂ, ಕುರಿಹೋತಗಳ ರಕ್ತದಿಂದಲೂ, ಟಗರುಗಳ ಪಿತ್ತಕೋಶದ ಕೊಬ್ಬಿನಿಂದಲೂ ರಕ್ತಭರಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರ ಖಡ್ಗವು ರಕ್ತದಲ್ಲಿ ಸ್ನಾನ ಮಾಡಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಮುಚ್ಚಲಾಗಿದೆ. ಏಕೆಂದರೆ ಯೆಹೋವ ದೇವರಿಗೆ ಬೊಚ್ರದಲ್ಲಿ ಬಲಿಯು, ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯು ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:6
25 ತಿಳಿವುಗಳ ಹೋಲಿಕೆ  

“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು".


ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.


ಕುರಿ, ಟಗರು, ಹೋತಗಳ ಹಾಗೆ ಅವರನ್ನು ವಧ್ಯಸ್ಥಾನಕ್ಕೆ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಅದರ ಗೂಳಿಗಳನ್ನೆಲ್ಲ ಕೊಲ್ಲಿರಿ. ಹೋಗಲಿ ಅವು ವಧ್ಯಸ್ಥಾನಕ್ಕೆ. ಅವುಗಳಿಗೆ ಧಿಕ್ಕಾರ. ಅವುಗಳಿಗೆ ಬಂದಿದೆ ವಿಪತ್ಕಾಲ! ಸಮೀಪಿಸಿದೆ ದಂಡನೆಯ ದಿನ!


“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.


ಆಕಾಶದಲ್ಲಿ ನನ್ನ ಖಡ್ಗವು ಆವೇಶದಿಂದ ಕಾರ್ಯಮಾಡಿದೆ. ಇಗೋ, ನಾನು ಶಪಿಸಿದ ಎದೋಮ್ ಎಂಬ ಜನಾಂಗದ ಮೇಲೆ ನ್ಯಾಯತೀರಿಸಲು ಅದು ಎರಗಲಿದೆ.


ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.


ಆಹಾ ಖಡ್ಗ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ! ಸಾಣೆ ಹಿಡಿದಿದೆ ಹತಿಸುವಂತೆ, ಮಸೆದಿದೆ ಮಿಂಚುವಂತೆ. ಸಂಭ್ರಮಿಸಲಾದೀತೆ ‘ನಮ್ಮ ಕುಮಾರನ ರಾಜದಂಡ’ ಎಂದು? ಮಿಕ್ಕ ದಂಡಗಳನ್ನೆಲ್ಲ ಧಿಕ್ಕರಿಸುವಂಥ ದಂಡವೆಂದುಕೊಂಡು?


ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.


ಹಿಂದಿರುಗುತ್ತಿರಲಿಲ್ಲ ಸೌಲನಾಕತ್ತಿ ವ್ಯರ್ಥವಾಗಿ, ಬರುತ್ತಿರಲಿಲ್ಲ ಯೋನಾತಾನನಾ ಬಿಲ್ಲು ಬರಿದಾಗಿ, ಹತರಾದವರ ರಕುತವನು ಹೀರದೆ ಪರಾಕ್ರಮಿಗಳ ಕೊಬ್ಬನು ರುಚಿಸದೆ.


ಬೆಳನು ಮರಣಹೊಂದಿದ ತರುವಾಯ ಬೊಚ್ರದ ಜೆರಹನ ಮಗ ಯೋಬಾಬ ಅವನ ಉತ್ತರಾಧಿಕಾರಿಯಾದನು.


ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II


ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.


ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.


‘ಕುರಿಗಾಹಿಗಳೇ, ಅರಚಿಗೋಳಾಡಿ ಮೇಷಪಾಲರೇ, ಬೂದಿಯಲ್ಲಿ ಬಿದ್ದು ಹೊರಳಾಡಿ. ನಿಮ್ಮನ್ನು ವಧಿಸುವ ಕಾಲ ಬಂದಿದೆ ನಾನು ನಿಮ್ಮನ್ನು ಭಂಗಪಡಿಸುವೆ. ನೀವು ಚೂರುಚೂರಾಗುವಿರಿ ಒಡೆದುಹೋದ ಅಂದವಾದ ಪಾತ್ರೆಯಂತೆ.


ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.


ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.


ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”


ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.


ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು