Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:7 - ಕನ್ನಡ ಸತ್ಯವೇದವು C.L. Bible (BSI)

7 ಕಾಡುಕೋಣಗಳಂತೆ, ಹೋರಿಗೂಳಿಗಳಂತೆ, ಈ ಯಜ್ಞಪಶುಗಳು ಬೀಳುವುವು; ನಾಡು ರಕ್ತದಿಂದು ತೊಯಿದಿರುವುದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಹೋರಿಗೂಳಿಗಳೂ ಬರುವವು; ಆ ದೇಶವು ರಕ್ತದಿಂದ ನೆನೆಯುವದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಟಗರುಗಳು, ದನಕುರಿಗಳು ಮತ್ತು ಬಲವಾದ ಹೋರಿಗಳು ಕೊಲ್ಲಲ್ಪಡುವವು. ಭೂಮಿಯು ಅವುಗಳ ರಕ್ತದಿಂದ ತುಂಬಿಹೋಗುವದು. ಅಲ್ಲಿನ ಧೂಳು ಅವುಗಳ ಕೊಬ್ಬಿನಿಂದ ಆವೃತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕಾಡುಕೋಣಗಳೂ ಹೋರಿಗೂಳಿಗಳೂ ಈ ಯಜ್ಞಪಶುಗಳೊಂದಿಗೆ ಬೀಳುವುವು; ನಾಡು ರಕ್ತದಿಂದ ತೊಯ್ದಿರುವುದು; ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:7
15 ತಿಳಿವುಗಳ ಹೋಲಿಕೆ  

ದಂಡಿಸು ಜಂಡು ಕಾಡುಮೃಗದಂಥಾ ನಾಡನು I ಗದರಿಸು ಹೋರಿ ದನಕುರಿಗಳಂಥಾ ನಾಡುಗಳನು II ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು I ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು II


ಅವರನ್ನು ದೇವರೇ ಕರೆದು ತಂದ ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ!


ಅದರ ಗೂಳಿಗಳನ್ನೆಲ್ಲ ಕೊಲ್ಲಿರಿ. ಹೋಗಲಿ ಅವು ವಧ್ಯಸ್ಥಾನಕ್ಕೆ. ಅವುಗಳಿಗೆ ಧಿಕ್ಕಾರ. ಅವುಗಳಿಗೆ ಬಂದಿದೆ ವಿಪತ್ಕಾಲ! ಸಮೀಪಿಸಿದೆ ದಂಡನೆಯ ದಿನ!


“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.


ಸಂಬಳಕ್ಕಾಗಿ ಈಜಿಪ್ಟ್ ಸೇರಿದ ದಂಡಾಳುಗಳು ನೋಡಲಿಕ್ಕೆ ಅವರು ಕೊಬ್ಬಿದ ಕರುಗಳು. ಆದರೂ ಬೆಂಗೊಟ್ಟು ಓಡಿಹೋಗಿರುವರು ನಿಲ್ಲದೆ, ವಿಪತ್ಕಾಲ, ದಂಡನೆಯ ದಿನ, ಬಂದೊದಗಿದೆ ಅವರಿಗೆ.


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.


ರಕ್ಷಿಸೆನ್ನನು ಸಿಂಹದ ಬಾಯಿಂದ I ಬಿಡಿಸು ಕಾಡುಕೋಣದ ಕೊಂಬಿನಿಂದ II


ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.


‘ಕುರಿಗಾಹಿಗಳೇ, ಅರಚಿಗೋಳಾಡಿ ಮೇಷಪಾಲರೇ, ಬೂದಿಯಲ್ಲಿ ಬಿದ್ದು ಹೊರಳಾಡಿ. ನಿಮ್ಮನ್ನು ವಧಿಸುವ ಕಾಲ ಬಂದಿದೆ ನಾನು ನಿಮ್ಮನ್ನು ಭಂಗಪಡಿಸುವೆ. ನೀವು ಚೂರುಚೂರಾಗುವಿರಿ ಒಡೆದುಹೋದ ಅಂದವಾದ ಪಾತ್ರೆಯಂತೆ.


ತೋಯಿಸುವೆನು ಸಮನಾಡನು ನಿನ್ನ ರಕ್ತಪ್ರವಾಹದಿಂದ, ಹಳ್ಳಕೊಳ್ಳಗಳು ತುಂಬಿ ತುಳುಕುವುವು ಅದರಿಂದ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನರಪುತ್ರನೇ, ಎಲ್ಲ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ: ನೀವು ಕೂಡಿಬನ್ನಿ; ನಾನು ಇಸ್ರಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.


ಟಗರು, ಕುರಿ, ಹೋತ, ಹೋರಿ, ಅಂತು ಬಾಷಾನಿನ ಕೊಬ್ಬಿದ ಪಶುಗಳು, ಅಂದರೆ ಬಲಿಷ್ಠರು, ಭೂಪತಿಗಳು ಇವರ ಮಾಂಸ ಹಾಗೂ ರಕ್ತ ನಿಮಗೆ ಸಿಕ್ಕುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು