Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:9 - ಕನ್ನಡ ಸತ್ಯವೇದವು C.L. Bible (BSI)

9 ಎದೋಮಿನ ತೊರೆಗಳು ಡಾಂಬರಾಗಿ ಹರಿಯುವುವು. ಅದರ ಮಣ್ಣು ಗಂಧಕವಾಗುವುದು, ನಾಡೆಲ್ಲಾ ಉರಿಯುವ ಡಾಂಬರಿನಂತೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಲ್ಲಿ ತೊರೆಗಳು ಶಿಲಾಜತುವಾಗಿ ಹರಿಯುವವು, ದೂಳು ಗಂಧಕವಾಗುವದು, ದೇಶವೆಲ್ಲಾ ಉರಿಯುವ ಶಿಲಾಜತುವಾಗುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎದೋಮಿನ ನದಿಗಳು ಕರಗಿರುವ ರಾಳದಂತಿರುವದು. ಅದರ ನೆಲವು ಸುಡುವ ಗಂಧಕದಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎದೋಮಿನ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವುವು. ಅದರ ಧೂಳು ಗಂಧಕವಾಗುವುದು, ದೇಶವು ಉರಿಯುವ ಡಾಂಬರಿನಂತೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:9
10 ತಿಳಿವುಗಳ ಹೋಲಿಕೆ  

ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು.


ಅನ್ಯಜನರು ವಾಸಮಾಡುವರು ಅವನ ಗುಡಾರದೊಳಗೆ ಗಂಧಕವನ್ನು ಸುರಿಸಲಾಗುವುದು ಅವನ ಮನೆಯ ಮೇಲೆ.


ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು