Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:10 - ಕನ್ನಡ ಸತ್ಯವೇದವು C.L. Bible (BSI)

10 ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:10
31 ತಿಳಿವುಗಳ ಹೋಲಿಕೆ  

ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಸಾಗುಸಾಗುತ್ತಾ ಬೆಳೆವುದಾ ಯಾತ್ರಿಕರ ಚೇತನ I ಪಡೆವರು ಸಿಯೋನ್ ಗಿರಿಯೊಳು ದೇವಾಧಿದೇವನ ದರ್ಶನ II


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ನಿನ್ನ ಸೂರ್ಯನು ಇನ್ನು ತೊಲಗನು. ನಿನ್ನ ಚಂದ್ರನು ಬಿಟ್ಟು ತೊಲಗನು. ಸರ್ವೇಶ್ವರನೇ ನಿನಗೆ ನಿತ್ಯಜ್ಯೋತಿ ನಿನ್ನ ದುಃಖ ದಿನಗಳಿಗಿದೆ ಸಮಾಪ್ತಿ.


ಹರ್ಷಾನಂದವನು ಮೊಳಗಿಸೆನ್ನೊಳು I ಪುಳಕಗೊಳ್ಳುವುವು ನೀ ಮುರಿದೆಲುಬುಗಳು II


ಸ್ತುತಿಸಲಿ ಆತನನು ವಿಮುಕ್ತಿ ಪಡೆದವರೆಲ್ಲರು I ಶತ್ರುಗಳಿಂದ ಬಿಡುಗಡೆ ಹೊಂದಿದವರೆಲ್ಲರು II


ಅಳುತಳುತ್ತಾ ಬಿತ್ತುವವರು I ನಲಿನಲಿಯುತ್ತಾ ಕೊಯ್ಯುವರು II


ಸಿಯೋನಿನ ಉದ್ಧಾರ ನ್ಯಾಯನೀತಿಯಿಂದ; ಅದಕ್ಕೆ ಹಿಂದಿರುಗುವವರ ಉದ್ಧಾರ ಸತ್ಸಂಬಂಧದಿಂದ;


ವೃದ್ಧಿಗೊಳಿಸಿರುವೆ ನೀನು ಆ ದೇಶವನು ಅಧಿಕರಿಸಿರುವೆ ಅದರ ತೋಷವನು ಸುಗ್ಗಿಕಾಲದಲಿ ಹಿಗ್ಗುವವರಂತೆ ಕೊಳ್ಳೆ ಹಂಚಿಕೊಳ್ಳುವವರಂತೆ ಹರ್ಷಿಸುವರವರು ನಿನ್ನ ಮುಂದೆ.


ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ನಾನು ಮಾಡುವ ಸೃಷ್ಟಿಕಾರ್ಯದಲ್ಲೇ ಸಂತೋಷಿಸಿ, ಎಂದೆಂದಿಗೂ ಆನಂದಿಸಿರಿ : ಹೌದು, ನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನು; ಅದರ ಜನರನ್ನು ಹರ್ಷಭರಿತರನ್ನಾಗಿಸುವೆನು.


ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II


ಸಿಗುವುದು ನಿಮಗಾದ ಅವಮಾನಕೆ ಇಮ್ಮಡಿ ಹಿರಿತನ ಆದ ತಿರಸ್ಕಾರಕೆ ಪ್ರತಿಯಾಗಿ ಸಂತಸ ಸಿರಿತನ. ದ್ವಿಗುಣವಾಗುವುದು ನಿಮಗೆ ನಾಡಿನ ಸಂಪದ ಅನಂತಕಾಲಕ್ಕು ನಿಮಗಿರುವುದು ಆನಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು