Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:3 - ಕನ್ನಡ ಸತ್ಯವೇದವು C.L. Bible (BSI)

3 ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ ನಡುಗುವ ಕಾಲುಗಳನ್ನು ದೃಢಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬಲಹೀನವಾದ ಕೈಗಳನ್ನು ಬಲಗೊಳಿಸಿರಿ, ನಡುಗುವ ಮೊಣಕಾಲುಗಳನ್ನು ಬಲಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ. ನಡುಗುವ ಮೊಣಕಾಲುಗಳನ್ನು ದೃಢಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:3
16 ತಿಳಿವುಗಳ ಹೋಲಿಕೆ  

ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಅಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು.


ಆಗ ಸ್ವರ್ಗದಿಂದ ದೂತನೊಬ್ಬನು ಯೇಸುವಿಗೆ ಪ್ರತ್ಯಕ್ಷವಾಗಿ ಅವರನ್ನು ಸಶಕ್ತರನ್ನಾಗಿ ಮಾಡಿದನು.


ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು.


ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯ ಬರುವುದು,” ಎಂದರು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರು ಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.


ಹೀಗಿರಲು ಮೋಶೆಯ ಕೈಗಳು ಆಯಾಸಗೊಳ್ಳುತ್ತಿದ್ದುದರಿಂದ ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದಿಟ್ಟು ಅದರ ಮೇಲೆ ಮೋಶೆಯನ್ನು ಕುಳ್ಳಿರಿಸಿದರು. ಅಲ್ಲದೆ ಬಲಗಡೆ ಒಬ್ಬನು ಎಡಗಡೆ ಒಬ್ಬನು ನಿಂತು ಅವನ ಕೈಗಳಿಗೆ ಆಧಾರಕೊಟ್ಟರು. ಈ ರೀತಿಯಾಗಿ ಅವನ ಕೈಗಳು ಹೊತ್ತು ಮುಳುಗುವ ತನಕ ಇಳಿಯದೆ ನಿಂತೇ ಇರುವಂತೆ ಮಾಡಿದರು.


ಅವರ ನೆರೆಯವರೆಲ್ಲರು ಕೊಡುಗೆಗಳನ್ನು ಕೊಟ್ಟರು; ಬೆಳ್ಳಿ ಸಾಮಾನುಗಳು, ಬಂಗಾರದ ಆಭರಣಗಳು, ಪಶುಪ್ರಾಣಿಗಳು, ಶ್ರೇಷ್ಠವಸ್ತುಗಳು, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.


ಮನುಷ್ಯರೂಪ ಹೊಂದಿದ್ದ ಆ ವ್ಯಕ್ತಿ ಪುನಃ ನನ್ನನ್ನು ಮುಟ್ಟಿ ಬಲಪಡಿಸಿದ.


ಜೆರುಸಲೇಮಿಗೆ ಈ ಪರಿ ಹೇಳುವರು ಆ ದಿನದೊಳು: “ಅಂಜಬೇಡ ಸಿಯೋನ್, ಸೋತು ಜೋಲುಬೀಳದಿರಲಿ ನಿನ್ನ ಕೈಗಳು.”


ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ; ನೀನು ಇಸ್ರಯೇಲರ ಅರಸನಾಗುವೆ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆ ಸೌಲ ತಿಳಿದುಕೊಂಡಿದ್ದಾರೆ.” ಎಂದು ಹೇಳಿ ದೇವರ ಹೆಸರಿನಲ್ಲಿ ಧೈರ್ಯತುಂಬಿದನು.


ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು