Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:5 - ಕನ್ನಡ ಸತ್ಯವೇದವು C.L. Bible (BSI)

5 ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಕುರುಡರ ಕಣ್ಣು ಕಾಣುವದು, ಕಿವುಡರ ಕಿವಿ ಕೇಳುವದು, ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಕುರುಡರಿಗೆ ದೃಷ್ಟಿ ಬರುವದು. ಅವರ ಕಣ್ಣುಗಳು ತೆರೆಯಲ್ಪಡುವವು. ಆಗ ಕಿವುಡರು ಕೇಳಿಸಿಕೊಳ್ಳುವರು. ಅವರ ಕಿವಿಗಳು ತೆರೆಯಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:5
31 ತಿಳಿವುಗಳ ಹೋಲಿಕೆ  

ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.


ಕಣ್ಣನ್ನೀಯುವನು ಪ್ರಭು ಕುರುಡರಿಗೆ I ಉದ್ಧಾರಕನಾ ಪ್ರಭು ಕುಗ್ಗಿದವರಿಗೆ I ಆತನ ಒಲವಿರುವುದು ಸಾಧು ಸಜ್ಜನರಿಗೆ II


ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಬಳಿಕ, ದೆವ್ವಹಿಡಿದು ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಅವನನ್ನು ಗುಣಪಡಿಸಿದರು. ಅವನಿಗೆ ದೃಷ್ಟಿ ಹಾಗೂ ಮಾತು ಎರಡೂ ಬಂದಿತು. ಅಲ್ಲಿದ್ದ ಜನರೆಲ್ಲರೂ ಬೆರಗಾದರು.


ದೇವಾಲಯದಲ್ಲಿ ತಮ್ಮ ಬಳಿಗೆ ಬಂದ ಕುರುಡರನ್ನೂ ಕುಂಟರನ್ನೂ ಯೇಸು ಸ್ವಸ್ಥಪಡಿಸಿದರು.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಕರೆಗೊಡಿರಿ ಆ ಜನರಿಗೆ ಕಣ್ಣಿದ್ದರೂ ಕುರುಡರಾದವರಿಗೆ ಕಿವಿಯಿದ್ದರೂ ಕಿವುಡಾದವರಿಗೆ.


ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಉಂಟುಮಾಡಿದವ ಸರ್ವೇಶ್ವರ.


ಅದಕ್ಕೆ ಸರ್ವೇಶ್ವರ, “ಮನುಷ್ಯರಿಗೆ ಬಾಯಿಕೊಟ್ಟವರು ಯಾರು? ಒಬ್ಬನನ್ನು ಮೂಕನಾಗಿ, ಮತ್ತೊಬ್ಬನನ್ನು ಕಿವುಡನಾಗಿ, ಇನ್ನೊಬ್ಬನನ್ನು ಕಣ್ಣುಳ್ಳವನಾಗಿ, ಮಗದೊಬ್ಬನನ್ನು ಕಣ್ಣಿಲ್ಲದವನಾಗಿ ಇಡುವವರು ಯಾರು? ಸರ್ವೇಶ್ವರನಾಗಿರುವ ನಾನೇ ಅಲ್ಲವೆ?


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಕೆಲವರಾದರೋ, “ಆ ಕುರುಡನಿಗೆ ಕಣ್ಣುಕೊಟ್ಟ ಈತ ಲಾಸರನು ಸಾಯದಂತೆ ಮಾಡಬಾರದಿತ್ತೆ?” ಎಂದರು.


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


ದೇವರು ಅವನ ಕಿವಿಗಳನ್ನು ತೆರೆಯುತ್ತಾನೆ ಉಪದೇಶಮಾಡಿ ಎಚ್ಚರಿಕೆ ನೀಡುತ್ತಾನೆ.


ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.


“ಕಿವುಡ ಜನರೇ ಕೇಳಿ ಕುರುಡರಾದ ನೀವು ಕಣ್ಣಿಟ್ಟು ನೋಡಿ;


ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು