Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:6 - ಕನ್ನಡ ಸತ್ಯವೇದವು C.L. Bible (BSI)

6 ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಣ್ಯದಲ್ಲಿ ಒರತೆಗಳು ಒಡೆಯುವವು, ಒಣ ನೆಲದಲ್ಲಿ ನದಿಗಳು ಹುಟ್ಟಿ ಹರಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯೂ ಹರ್ಷದಿಂದ ಹಾಡುವುದು. ಏಕೆಂದರೆ ಮರುಭೂಮಿಯಲ್ಲಿ ನೀರೂ, ಮರುಭೂಮಿಯಲ್ಲಿ ಒರತೆಗಳೂ ಒಡೆಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:6
41 ತಿಳಿವುಗಳ ಹೋಲಿಕೆ  

ಒಮ್ಮೆ ಯೇಸುಸ್ವಾಮಿ ಒಂದು ಮೂಕ ದೆವ್ವವನ್ನು ಬಿಡಿಸುತ್ತಿದ್ದರು. ಆ ದೆವ್ವ ಬಿಟ್ಟುಹೋದ ಮೇಲೆ ಮೂಕನು ಮಾತನಾಡಿದನು. ಜನರು ಆಶ್ಚರ್ಯಚಕಿತರಾದರು.


ಆತುರಗಾರರ ಬುದ್ಧಿ ಸಾವಧಾನದಿಂದ ಗ್ರಹಿಸುವುದು. ತೊದಲುಮಾತಿನವರ ನಾಲಿಗೆ ಸ್ವಚ್ಛವಾಗಿಯೂ ತ್ವರಿತವಾಗಿಯೂ ನುಡಿಯುವುದು.


ಬಳಿಕ, ದೆವ್ವಹಿಡಿದು ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಅವನನ್ನು ಗುಣಪಡಿಸಿದರು. ಅವನಿಗೆ ದೃಷ್ಟಿ ಹಾಗೂ ಮಾತು ಎರಡೂ ಬಂದಿತು. ಅಲ್ಲಿದ್ದ ಜನರೆಲ್ಲರೂ ಬೆರಗಾದರು.


ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು.


‘ಸುಂದರದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆಬೇಡುತ್ತಿದ್ದನು.


ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು.


ದೇವಾಲಯದಲ್ಲಿ ತಮ್ಮ ಬಳಿಗೆ ಬಂದ ಕುರುಡರನ್ನೂ ಕುಂಟರನ್ನೂ ಯೇಸು ಸ್ವಸ್ಥಪಡಿಸಿದರು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.


ಆತ ಮರುಭೂಮಿಯಲ್ಲಿ ತನ್ನ ಜನರನ್ನು ನಡೆಸಿದಾಗ ಬಳಲಲಿಲ್ಲ ಅವರು ಬಾಯಾರಿಕೆಯಿಂದ; ಹರಿಸಿದನು ನೀರನ್ನು ಅವರಿಗಾಗಿ ಕಲ್ಲಿನೊಳಗಿಂದ ಜಲವಾಹಿನಿ ಹರಿಯಿತು ಆತ ಸೀಳಿದ ಬಂಡೆಯಿಂದ.


ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು.


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.


ಕೈಯೆತ್ತಿ ತನ್ನ ಕೈಯಲ್ಲಿದ್ದ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ನೀರು ಪ್ರವಾಹವಾಗಿ ಹೊರಟಿತು. ಜನಸಮೂಹದವರೂ ಅವರ ಜಾನುವಾರಗಳೂ ಕುಡಿದರು.


ಅಲ್ಲೇ ಹೋರೇಬಿನಲ್ಲಿರುವ ಬಂಡೆಯೊಂದರ ಮೇಲೆ ನಾನೇ ನಿನ್ನ ಮುಂದೆ ನಿಲ್ಲುವೆನು. ಆ ಬಂಡೆಯನ್ನು ನೀನು ಹೊಡೆ. ಆಗ ಅದರಿಂದ ನೀರು ಹೊರಡುವುದು; ಜನರು ಕುಡಿಯಲಿ,” ಎಂದು ಅಪ್ಪಣೆಕೊಟ್ಟರು. ಹಾಗೆಯೇ ಮೋಶೆ ಇಸ್ರಯೇಲರ ಹಿರಿಯರ ಕಣ್ಣೆದುರಿನಲ್ಲೆ ಮಾಡಿದನು.


ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು.


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಶತ್ರು ಹಡಗುಗಳ ಹಗ್ಗಗಳು ಸಡಿಲ, ಅದರ ಕೂವೆಯ ಬುಡ ಸಡಿಲ; ಅದರ ಹಾಯಿಯನ್ನು ಮುದುರದಂತೆ ಹಿಡಿದುಕೊಳ್ಳಲು ಅಸಾಧ್ಯ. ಅವುಗಳನ್ನು ಸೂರೆಮಾಡಿ ಕೊಳ್ಳೆಹೊಡೆದು, ಸಮನಾಗಿ ಹಂಚಿಕೊಳ್ಳಲು ಎಲ್ಲರಿಗೂ ಆಸ್ಪದವುಂಟು. ಕುಂಟರು ಕೂಡ ತಮ್ಮ ಪಾಲನ್ನು ಪಡೆಯಬಲ್ಲರು.


ಘೋಷಿಸಲಿ ಮರುಭೂಮಿಯೂ ಅದರ ನಗರಗಳೂ ಕೇದಾರಿನವರೂ ಗ್ರಾಮನಿವಾಸಿಗಳೂ ಜಯಘೋಷಮಾಡಲಿ ಸೆಲ ಪಟ್ಟಣದವರೂ ಸಂತೋಷದಿಂದ ಹರ್ಷಧ್ವನಿಗೈಯಲಿ ಆ ಪರ್ವತದ ತುತ್ತತುದಿಗಳಿಂದ.


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಕೆರೆಯಾಗಿಸಿದಾ ಮರುಭೂಮಿಯನು I ಊಟೆಯಾಗಿಸಿದ ಆ ಒಣನೆಲವನು II


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು