Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:14 - ಕನ್ನಡ ಸತ್ಯವೇದವು C.L. Bible (BSI)

14 ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿ; ನಿಮ್ಮನ್ನು ಬಿಡಿಸಲು ಅವನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅರಸನು ನಿಮಗೆ, ‘ಹಿಜ್ಕೀಯನಿಂದ ಮೋಸ ಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವನು ನಿಮಗೆ - ಹಿಜ್ಕೀಯನಿಂದ ಮೋಸಹೋಗಬೇಡಿರಿ. ಅವನು ನಿಮ್ಮನ್ನು ಬಿಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಮಹಾರಾಜನಾಗಿರುವ ಅಶ್ಶೂರದ ಅರಸನ ಮಾತುಗಳನ್ನು ಕೇಳಿರಿ: “‘ಹಿಜ್ಕೀಯನು ನಿಮ್ಮನ್ನು ಮೋಸಪಡಿಸದಂತೆ ನೋಡಿಕೊಳ್ಳಿರಿ. ಅವನು ನಮ್ಮ ಸಾಮರ್ಥ್ಯದಿಂದ ನಿಮ್ಮನ್ನು ರಕ್ಷಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ ಏಕೆಂದರೆ ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:14
11 ತಿಳಿವುಗಳ ಹೋಲಿಕೆ  

ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.


ಹಿಜ್ಕೀಯನು, ‘ನಮ್ಮ ದೇವರಾದ ಸರ್ವೇಶ್ವರಸ್ವಾಮಿ ಅಸ್ಸೀರಿಯಾದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು,’ ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕೇ ಅಲ್ಲದೆ ಮತ್ತೇನಕ್ಕೂ ಅಲ್ಲ.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?


ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲಿ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು