Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:15 - ಕನ್ನಡ ಸತ್ಯವೇದವು C.L. Bible (BSI)

15 ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲಿ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹಿಜ್ಕೀಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’” ಎಂಬುದಾಗಿ ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹಿಜ್ಕೀಯನು ನಿಮಗೆ - ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೂ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂಬದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಯೆಹೋವನನ್ನು ನಂಬಿರಿ. ಆತನು ನಮ್ಮನ್ನು ರಕ್ಷಿಸುವನು. ಅಶ್ಶೂರದ ಅರಸನು ನಮ್ಮ ಪಟ್ಟಣವನ್ನು ಸೋಲಿಸಲು ಬಿಡುವದಿಲ್ಲ” ಎಂದು ಹಿಜ್ಕೀಯನು ಹೇಳಿದರೆ ಅವನನ್ನು ನಂಬಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರೆಂದೂ, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲವೆಂದೂ ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:15
10 ತಿಳಿವುಗಳ ಹೋಲಿಕೆ  

ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.


“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ಹೇಳಿ, ನಿನ್ನನ್ನು ಮೋಸಗೊಳಿಸಿದ್ದಾನೆ.


‘ಬಹುಶಃ, ನೀನು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ’, ಎಂದು ಹೇಳಬಹುದು. ಹಿಜ್ಕೀಯನು, ಇದೇ ಬಲಿಪೀಠದ ಮುಂದೆ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೆ ಮತ್ತು ಜೆರುಸಲೇಮಿನವರಿಗೆ ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II


‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ. ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ನಾಡನ್ನು ಬಿಡಿಸಿಕೊಂಡಿದ್ದಾರೆ?


ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಅರಸನ ಕೈಯಿಂದ ಬಿಡಿಸಲಾರದೆ ಹೋದಮೇಲೆ ಸರ್ವೇಶ್ವರ ಜೆರುಸಲೇಮನ್ನು ಆತನ ಕೈಯಿಂದ ಬಿಡಿಸಿ ಕಾಪಾಡಲು ಸಾಧ್ಯವೋ?’ ಎಂದು ಕೇಳಿದನು.


ಅಸ್ಸೀರಿಯದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು. ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವಿಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು