Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:16 - ಕನ್ನಡ ಸತ್ಯವೇದವು C.L. Bible (BSI)

16 ಅಸ್ಸೀರಿಯದ ಅರಸನಾದ ನನ್ನ ಒಡೆಯನ ಮಾತನ್ನು ಕೇಳಿ; ಆತನೊಡನೆ ಒಪ್ಪಂದ ಮಾಡಿಕೊಂಡು ಆತನ ಆಶ್ರಯವನ್ನು ಸೇರಿರಿ. ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗೂ ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “‘ಹಿಜ್ಕೀಯನ ಮಾತುಗಳನ್ನು ಕೇಳಬೇಡಿ. ಅಶ್ಶೂರದ ಅರಸನ ಮಾತುಗಳಿಗೆ ಕಿವಿಗೊಡಿರಿ. ಅವನು ಹೇಳುವುದೇನೆಂದರೆ: “ನೀವು ನನ್ನೊಡನೆ ಒಪ್ಪಂದ ಮಾಡಿಕೊಂಡು ನಿಮ್ಮ ನಗರದಿಂದ ಹೊರಗೆ ಬಂದು ನನ್ನನ್ನು ಸಂಧಿಸಬೇಕು. ಆಗ ನೀವೆಲ್ಲರೂ ನಿಮ್ಮ ಮನೆಗಳಿಗೆ ಹೋಗಬಹುದು; ನಿಮ್ಮ ಸ್ವಂತ ದ್ರಾಕ್ಷಿತೋಟದ ದ್ರಾಕ್ಷಿಹಣ್ಣುಗಳನ್ನು ತಿನ್ನಬಹುದು; ಅಂಜೂರದ ಮರದ ಹಣ್ಣನ್ನು ತಿನ್ನಬಹುದು ನೀವೆಲ್ಲರೂ ನಿಮ್ಮ ಬಾವಿಯ ನೀರನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:16
16 ತಿಳಿವುಗಳ ಹೋಲಿಕೆ  

ಆ ದಿನದಂದು ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆಗಳ ಹಾಗೂ ಅಂಜೂರದ ಗಿಡಗಳ ನೆರಳಿನಲ್ಲಿ ಸಮಾಧಾನದಿಂದ ವಿಶ್ರಮಿಸಲು ಕರೆಯುವಿರಿ. ಇದು ಸೇನಾಧಿಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.


ಆದ್ದರಿಂದಲೇ, ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಏರ್ಪಾಡನ್ನು ಮಾಡುವಂತೆ ಈ ಸಹೋದರರನ್ನು ನಮಗೆ ಮುಂಚಿತವಾಗಿಯೇ ನಿಮ್ಮ ಬಳಿಗೆ ಕಳುಹಿಸುವುದು ಉಚಿತವೆಂದು ನನಗೆ ತೋಚಿತು. ಹೀಗೆ ಈ ಕೊಡುಗೆ ಬಲಾತ್ಕಾರವಾದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ನಿಧಿ ಆಗಿರುತ್ತದೆ.


ನಿನ್ನ ಸ್ವಂತ ಕೊಳದ ನೀರನ್ನೇ ಸೇವಿಸು, ನಿನ್ನ ಬಾವಿಯಿಂದ ಉಕ್ಕಿಬರುವ ಜಲವನ್ನೇ ಕುಡಿ.


ಅಸ್ಸೀರಿಯದ ಅರಸನಾದ ನನ್ನ ಮಾತನ್ನು ಕೇಳಿ; ನನ್ನೊಡನೆ ಒಪ್ಪಂದಮಾಡಿಕೊಂಡು ನನ್ನ ಆಶ್ರಯವನ್ನು ಸೇರಿರಿ, ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗು ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನೇ ಕುಡಿಯುವನು.


ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.


ಇಸ್ರಯೇಲ್ ಹಾಗು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾದರು; ಅನ್ನ ಪಾನಗಳಲ್ಲಿ ಸಂತೃಪ್ತರಾಗಿ ಸಂತೋಷದಿಂದ ಬಾಳುತ್ತಿದ್ದರು.


ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.


ನಿಮ್ಮ ದಾಸಿ ತಂದ ಈ ಕಾಣಿಕೆಯನ್ನು ಅಂಗೀಕರಿಸಿರಿ. ಅದು ತಮ್ಮ ಸೇವಕರಿಗೆ ಸಲ್ಲಲಿ.


ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿವಸಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಯೇಲರ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ ನಾವು ನಿನ್ನ ಬಳಿಗೆ ಬಂದು ಶರಣಾಗುತ್ತೇವೆ,” ಎಂದು ವಿನಂತಿಸಿದರು.


ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.


‘ನಿಮ್ಮ ದಾಸ ಯಕೋಬನು ನಮ್ಮ ಹಿಂದೆ ಬರುತ್ತಿದ್ದಾರೆ,’ ಎನ್ನಿರಿ” ಎಂದು ಆಜ್ಞಾಪಿಸಿದನು. ಯಕೋಬನು ತನ್ನೊಳಗೆ, “ನನಗೆ ಮುಂಚಿತವಾಗಿ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ನಾನು ಅವನನ್ನು ಭೇಟಿ ಆಗುತ್ತೇನೆ. ಆಗ ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು,” ಎಂದುಕೊಂಡನು.


ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.


ಸ್ವಲ್ಪ ಕಾಲವಾದನಂತರ ಆತನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವುವು, ನಿಮ್ಮ ನಾಡಿಗೆ ಸರಿಸಮಾನವಾಗಿರುವುವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು