Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:19 - ಕನ್ನಡ ಸತ್ಯವೇದವು C.L. Bible (BSI)

19 ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರ್ಯವನ್ನು ನನ್ನ ಅರಸನ ಕೈಯಿಂದ ಬಿಡಿಸಿಕೊಂಡರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈ ತಪ್ಪಿಸಿದವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹಮಾತಿನ, ಅರ್ಪಾದಿನ ದೇವರೆಲ್ಲಿ? ಅವರು ಸೋತುಹೋದರು. ಸೆಫರ್ವಯಿಮಿನ ದೇವರುಗಳೆಲ್ಲಿ? ಅವರು ಸಮಾರ್ಯವನ್ನು ನನ್ನ ಬಲದಿಂದ ರಕ್ಷಿಸಿದರೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಮಾತ್, ಅರ್ಪಾದ್, ಸೆಫರ್ವಯಿಮಿನ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:19
9 ತಿಳಿವುಗಳ ಹೋಲಿಕೆ  

ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.


ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅದರ ಮೂಲೆ ಚೆದಾದಿನ ಹತ್ತಿರ ಇರುವುದು.


ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು