Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:2 - ಕನ್ನಡ ಸತ್ಯವೇದವು C.L. Bible (BSI)

2 ಬಳಿಕ ಅವನು ಲಾಕೀಷಿನಿಂದ ರಬ್ಷಾಕೆ ಎಂಬ ಒಬ್ಬ ದಳಪತಿಯನ್ನು ಮಹಾಸೈನ್ಯದೊಂದಿಗೆ ಜೆರುಸಲೇಮಿನಲ್ಲಿದ್ದ ರಾಜ ಹಿಜ್ಕೀಯನ ಬಳಿಗೆ ಕಳುಹಿಸಿದನು. ಈ ದಳಪತಿ ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ ಕೆರೆಯ ಕಾಲುವೆಯ ಬಳಿ ಪಾಳೆಯ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬುವವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಅಗಸರ ಹೊಲದ ಕಡೆಯಿಂದ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತನಾದ ರಬ್ಷಾಕೆ ಎಂಬವನನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವನು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಶ್ಶೂರದ ರಾಜನಾದ ಸನ್ಹೇರೀಬನು ತನ್ನ ಸೇನಾದಂಡನಾಯಕನನ್ನು ಒಂದು ದೊಡ್ಡ ಸೈನ್ಯದೊಡನೆ ಜೆರುಸಲೇಮಿನಲ್ಲಿದ್ದ ಅರಸನಾದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಸೇನಾದಂಡನಾಯಕ ತನ್ನ ಸೈನ್ಯದೊಡನೆ ಲಾಕೀಷಿನಿಂದ ಜೆರುಸಲೇಮಿಗೆ ಹೊರಟನು. ಅವರು ಮೇಲಿನ ಕೊಳದ ಬಳಿಯಲ್ಲಿರುವ ನೀರುಕಾಲುವೆಯ ಬಳಿ ನಿಂತರು. ಮೇಲಿನ ಕೊಳವು ಅಗಸರ ಬಯಲಿಗೆ ಹೋಗುವ ಮಾರ್ಗದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಅಸ್ಸೀರಿಯದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:2
10 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು : “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು :


ಅವನು ಇಸ್ರಯೇಲರನ್ನು ಸೆರೆಹಿಡಿದು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳು ಇವುಗಳಿಗೆ ಕಳುಹಿಸಿದನು.


ಆದುದರಿಂದ ಬಾ, ಎಂದು ನನ್ನ ಒಡೆಯನಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?


ಆಗ ಬಾಬಿಲೋನಿನ ಅರಸನ ಸೈನ್ಯವು ಜೆರುಸಲೇಮಿಗೂ ಮತ್ತು ಜುದೇಯದೊಳಗೆ ಕೋಟೆಕೊತ್ತಲದ ನಗರಗಳಾಗಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧ ಯುದ್ಧಮಾಡುತ್ತಿತ್ತು.


ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು.


ಆ ಪಟ್ಟಣದಲ್ಲಿದ್ದ ಇಸ್ರಯೇಲರ ಅರಸ ಅಹಾಬನ ಬಳಿಗೆ ದೂತರನ್ನು ಕಳುಹಿಸಿದನು.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು