Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:13 - ಕನ್ನಡ ಸತ್ಯವೇದವು C.L. Bible (BSI)

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬೀ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹಮಾತಿನ ಅರಸನೆಲ್ಲಿ? ಅರ್ಪಾದಿನ ಅರಸನೆಲ್ಲಿ? ಸೆಫರ್ವಯಿಮ್ ನಗರದ ಅರಸನೆಲ್ಲಿ? ಹೇನ, ಇವ್ವಾ ಎಂಬ ಪಟ್ಟಣಗಳ ಅರಸರೆಲ್ಲಿ? ಅವರೆಲ್ಲರೂ ಹತರಾಗಿದ್ದಾರೆ. ಎಲ್ಲಾ ನಾಶವಾಗಿ ಹೋದರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:13
10 ತಿಳಿವುಗಳ ಹೋಲಿಕೆ  

ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.


ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರ್ಯವನ್ನು ನನ್ನ ಅರಸನ ಕೈಯಿಂದ ಬಿಡಿಸಿಕೊಂಡರೋ?


ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರಿಯವನ್ನು ನನ್ನ ಕೈಯಿಂದ ತಪ್ಪಿಸಿ ಬಿಡಿಸಿಕೊಂಡರೋ?


ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ನನ್ನ ತಂದೆ ತಾತಂದಿರು ಗೋಜಾನ್, ಹಾರನ್, ರೆಚೆಪ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.


ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು,


“ಅವರು ಅರಸರನ್ನು ಅಪಹಾಸ್ಯಮಾಡುವರು; ಅಧಿಪತಿಗಳನ್ನು ಪರಿಹಾಸ್ಯಕ್ಕೆ ಗುರಿಮಾಡುವರು. ಕೋಟೆಗಳನ್ನು ಧೂಳೀಪಟ ಮಾಡುವರು. ಮಣ್ಣುಗುಡ್ಡೆ ಹಾಕಿ ಆಕ್ರಮಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು