Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:14 - ಕನ್ನಡ ಸತ್ಯವೇದವು C.L. Bible (BSI)

14 ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹಿಜ್ಕೀಯನು ಆ ದೂತರ ಕೈಗಳಿಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ಅನಂತರ ನೇರವಾಗಿ ಯೆಹೋವನ ಆಲಯಕ್ಕೆ ಹೋಗಿ ಆ ಪತ್ರವನ್ನು ಯೆಹೋವನ ಮುಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:14
16 ತಿಳಿವುಗಳ ಹೋಲಿಕೆ  

ಹಿಜ್ಕೀಯನು, ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು, ಹೀಗೆಂದು ಪ್ರಾರ್ಥನೆ ಮಾಡಿದನು:


ಈ ವರದಿಯನ್ನು ಕೇಳಿದ ಹಿಜ್ಕೀಯನು ಕೂಡ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು, ಸರ್ವೇಶ್ವರ ಸ್ವಾಮಿಯ ಆಲಯಕ್ಕೆ ಹೋದನು.


ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II


ಎಲ್ಲಿಯತನಕ ದೇವಾ, ಶತ್ರುನಿಂದೆಗೆ ನೀ ಗುರಿಯಾಗುವೇ? I ಅನವರತ ನಿನ್ನ ನಾಮವನು ಧಿಕ್ಕರಿಸುವುದು ಸರಿಯೇ? II


ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ


“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.


ಹೀಗೆಂದು ಪ್ರಾರ್ಥನೆ ಮಾಡಿದನು :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು