Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:16 - ಕನ್ನಡ ಸತ್ಯವೇದವು C.L. Bible (BSI)

16 “ಇಸ್ರಯೇಲಿನ ದೇವರೇ, ಸೇನಾಧೀಶ್ವರ ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇಸ್ರೇಲರ ದೇವರೇ, ಸರ್ವಶಕ್ತನಾದ ಯೆಹೋವನೇ, ನೀನು ಕೆರೂಬಿಯರ ರೆಕ್ಕೆಯ ಮೇಲೆ ಆಸೀನನಾಗಿರುವೆ. ಇಡೀ ಭೂಮಂಡಲದಲ್ಲಿರುವ ರಾಜ್ಯಗಳನ್ನೆಲ್ಲಾ ನೀನೇ ಆಳುವವನಾಗಿರುವೆ; ಹೌದು, ನೀನೊಬ್ಬನೇ ಆಳುವವನಾಗಿರುವೆ. ನೀನು ಆಕಾಶವನ್ನೂ ಭೂಮಿಯನ್ನೂ ನಿರ್ಮಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಸೇನಾಧೀಶ್ವರ ಯೆಹೋವ ದೇವರೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:16
34 ತಿಳಿವುಗಳ ಹೋಲಿಕೆ  

ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II


ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.


ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.


ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ.


ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೆ I ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೆ II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.


ಸರ್ವೇಶ್ವರನ ಹೆಸರಿಗಾಗಿ ಒಂದು ಪೀಠವನ್ನು ಕಟ್ಟಿಸಿದನು. ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗಿಸಿ ಕಾಲುವೆ ಮಾಡಿಸಿದನು.


‘ಸರ್ವಶಕ್ತರಾದ ಸರ್ವೆಶ್ವರ, ಇಸ್ರಯೇಲರ ದೇವರು,’ ಎಂಬ ತಮ್ಮ ನಾಮಧೇಯಗಳಿಗೆ ಸದಾಕಾಲವೂ ಮಹಿಮೆ ಉಂಟಾಗಲಿ! ತಮ್ಮ ದಾಸ ದಾವೀದನ ಮನೆತನವು ನಿಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ!


ಹೀಗೆಂದು ಪ್ರಾರ್ಥನೆ ಮಾಡಿದನು :


ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


ಜಗವನು, ಅದರಲ್ಲಿನ ಮನುಜರನು ಸೃಜಿಸಿದವನು ನಾನೇ, ಆಕಾಶಮಂಡಲವನು ವಿಶಾಲವಾಗಿ ಹರಡಿದ್ದು ನನ್ನ ಕೈಗಳೇ, ಸೂರ್ಯ, ಚಂದ್ರ, ನಕ್ಷತ್ರಗಳನು ನಿಯಂತ್ರಿಸುವವನು ನಾನೆ.


ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು