Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:17 - ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ. ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕೋಸ್ಕರ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನೇ, ಕಿವಿಗೊಟ್ಟು ಕೇಳು. ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನೇ, ನನ್ನ ಮಾತುಗಳಿಗೆ ಕಿವಿಗೊಡು. ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪ ದೇವರಾದ ನಿನ್ನನ್ನು ಅವಮಾನಮಾಡಿ ಬರೆದ ಪತ್ರವನ್ನು ಕೇಳಿಸಿಕೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:17
17 ತಿಳಿವುಗಳ ಹೋಲಿಕೆ  

“ನನ್ನ ದೇವರೇ, ಕಟಾಕ್ಷವಿಡಿ, ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡಿ.


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ಸದುತ್ತರ ಪಾಲಿಪೆಯೆಂದು ನಂಬಿ ಬೇಡುವೆನಯ್ಯಾ I ಮೊರೆಯಿಡುವೆ ದೇವಾ, ಕಿವಿಗೊಟ್ಟು ಆಲಿಸಯ್ಯಾ II


ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II


ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ಎಲ್ಲಿಯತನಕ ದೇವಾ, ಶತ್ರುನಿಂದೆಗೆ ನೀ ಗುರಿಯಾಗುವೇ? I ಅನವರತ ನಿನ್ನ ನಾಮವನು ಧಿಕ್ಕರಿಸುವುದು ಸರಿಯೇ? II


ಸತ್ಯಸ್ವರೂಪನೆ, ನನ್ನ ಬಿಡಿಸಿ ರಕ್ಷಿಸಯ್ಯಾ I ನನಗೆ ಕಿವಿಗೊಟ್ಟು ಪ್ರಭು ನನ್ನನುದ್ಧರಿಸಯ್ಯಾ II


ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು.


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.


ನನಗಿದೆ ಪ್ರಭುವಿನಲ್ಲಿ ಪ್ರೀತಿ I ಆಲಿಸಿಹನಾತ ನನ್ನ ವಿನಂತಿ II


ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗೆ ಕಿವಿಗೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು