Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:2 - ಕನ್ನಡ ಸತ್ಯವೇದವು C.L. Bible (BSI)

2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ : “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ವೃದ್ಧಯಾಜಕರು ಇವರನ್ನು ಕರಿಸಿ - ನೀವು ಗೋಣೀತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹಿಜ್ಕೀಯನು ಅರಮನೆಯ ಅಡಳಿತಗಾರನಾದ ಎಲ್ಯಾಕೀಮನನ್ನು, ಕಾರ್ಯದರ್ಶಿಯಾದ ಶೆಬ್ನನನ್ನು ಯಾಜಕರ ಹಿರಿಯರೊಂದಿಗೆ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಕಳುಹಿಸಿದನು. ಇವರು ತಮ್ಮ ಮನಸ್ಸಿನ ದುಗುಡವನ್ನು ಪ್ರದರ್ಶಿಸುವಂತೆ ಶೋಕವಸ್ತ್ರಗಳನ್ನು ಧರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:2
15 ತಿಳಿವುಗಳ ಹೋಲಿಕೆ  

ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು :


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು,


ಆಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ‍ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬ ಮೂವರು ಅಲ್ಲಿಗೆ ಬಂದರು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು, ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ,


ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಅಲ್ಲಿಗೆ ಬಂದರು.


ಅದಕ್ಕೆ ಮೂರು ವರ್ಷಗಳಿಗೆ ಮುಂಚೆಯೆ ಆಮೋಚನ ಮಗ ಯೆಶಾಯನಿಗೆ ಸರ್ವೇಶ್ವರ ಮುನ್ಸೂಚನೆಯಾಗಿ ಹೀಗೆಂದು ಹೇಳಿದ್ದರು : “ಎದ್ದೇಳು, ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು, ಕಾಲಿಗೆ ಹಾಕಿರುವ ಕೆರವನ್ನು ಕಳಚು.” ಅಂತೆಯೇ ಯೆಶಾಯನು ದಿಗಂಬರನಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೀಗೆ ನುಡಿದಿದ್ದಾರೆ : “ಹೋಗು, ಅರಮನೆಯ ಮೇಲ್ವಿಚಾರಕ ಶೆಬ್ನ ಎಂಬ ಅಧ್ಯಕ್ಷನಿಗೆ ಹೀಗೆಂದು ಹೇಳು :


“ಆ ದಿನದಂದು, ನನ್ನ ದಾಸನೂ ಹಿಲ್ಕಿಯನ ಮಗನೂ ಆದ ಎಲ್ಯಾಕೀಮನನ್ನು ಬರಮಾಡುವೆನು.


ಆಗ ಆಮೋಚನ ಮಗ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ : “ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಈ ಮಾತುಗಳನ್ನು ಕೇಳು : ನೀನು ಅಸ್ಸೀರಿಯದ ಅರಸ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರ ಸ್ವಾಮಿಗೆ ಮುಟ್ಟಿವೆ. ಅವರು ಅವನಿಗೆ ವಿರುದ್ಧ ಹೀಗೆಂದಿದ್ದಾರೆ -


ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು.


ನಡೆದ ಸಂಗತಿಯನ್ನೆಲ್ಲಾ ಕೇಳಿದಾಗ, ಮೊರ್ದೆಕೈ ತನ್ನ ಬಟ್ಟೆಗಳನ್ನು ಹರಿದು ಗೋಣಿತಟ್ಟನ್ನು ಉಟ್ಟು, ಬೂದಿಯನ್ನು ಸುರಿದುಕೊಂಡು ನಗರದ ಮಧ್ಯೆ ಹೋಗುತ್ತಾ ಅಪಾರ ದುಃಖದಿಂದ ಗೋಳಾಡಿದನು.


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು