Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:20 - ಕನ್ನಡ ಸತ್ಯವೇದವು C.L. Bible (BSI)

20 ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ನೀನು ನಮ್ಮ ದೇವರಾದ ಯೆಹೋವನು. ಆದ್ದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:20
21 ತಿಳಿವುಗಳ ಹೋಲಿಕೆ  

‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.


ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.


ಸುಟ್ಟು ನೀ ಭಸ್ಮಮಾಡು ಕೋಪಾಗ್ನಿಯಿಂದ I ಸ್ಪಷ್ಟವಾಗಲಿ ಇಡೀ ಲೋಕಕ್ಕಿದರಿಂದ I ದೇವನಾಳುತಿಹನೆಂದು ಇಸ್ರಯೇಲಿನಿಂದ II


ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


“ಇಸ್ರಯೇಲಿನ ದೇವರೇ, ಸೇನಾಧೀಶ್ವರ ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


“ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ನಾನು ಈಗ ನಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದ ಪ್ರಾರ್ಥನೆಯು ಹಗಲಿರುಳು ಅವರ ಜ್ಞಾಪಕದಲ್ಲಿರಲಿ.


ಭೂಲೋಕದ ಜನರೆಲ್ಲರೂ ಸರ್ವೇಶ್ವರನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ, ಅವರು ಅವಶ್ಯವಿರುವಾಗೆಲ್ಲಾ ತಮ್ಮ ದಾಸನ ಹಾಗು ಪ್ರಜೆಗಳಾದ ಇಸ್ರಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು