Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:21 - ಕನ್ನಡ ಸತ್ಯವೇದವು C.L. Bible (BSI)

21 ಆಗ ಆಮೋಚನ ಮಗ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ : “ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಈ ಮಾತುಗಳನ್ನು ಕೇಳು : ನೀನು ಅಸ್ಸೀರಿಯದ ಅರಸ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರ ಸ್ವಾಮಿಗೆ ಮುಟ್ಟಿವೆ. ಅವರು ಅವನಿಗೆ ವಿರುದ್ಧ ಹೀಗೆಂದಿದ್ದಾರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ - ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು; ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಯೆಹೋವನು ಕೇಳಿ ಅವನನ್ನು ಕುರಿತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲರ ದೇವರಾದ ಯೆಹೋವನು ಹೇಳುವುದೇನೆಂದರೆ: ‘ಅಶ್ಶೂರದ ಅರಸನಾದ ಸನ್ಹೇರೀಬನ ಪತ್ರದ ವಿಷಯವಾಗಿ ನೀನು ಪ್ರಾರ್ಥಿಸುವದನ್ನು ನಾನು ಕೇಳಿದೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ, “ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು, ಇಸ್ರಾಯೇಲಿನ ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದ್ದನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:21
12 ತಿಳಿವುಗಳ ಹೋಲಿಕೆ  

ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ : “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಆತನನು ಪ್ರಾರ್ಥಿಸುವೆ, ಆತ ಆಲಿಸುವನು ತೀರಿಸುವೆ ಆತನಿಗೆ ನೀ ಹೊತ್ತ ಹರಕೆಗಳನು.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು