ಯೆಶಾಯ 37:26 - ಕನ್ನಡ ಸತ್ಯವೇದವು C.L. Bible (BSI)26 ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇದನ್ನು ನೀನು ಕೇಳಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಆದರೆ ದೇವರು ಏನು ಹೇಳುತ್ತಾನೆಂದು ಕೇಳಿದೆಯಾ? ಬಹುಕಾಲದ ಹಿಂದೆ ನಾನು ಯೋಜನೆಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು. ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ ಅಧ್ಯಾಯವನ್ನು ನೋಡಿ |