Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:32 - ಕನ್ನಡ ಸತ್ಯವೇದವು C.L. Bible (BSI)

32 ಆ ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು, ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು, ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೆರೂಸಲೇಮಿನಲ್ಲಿ ಉಳಿದವರು ಹರಡಿಕೊಳ್ಳುವರು, ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೆರೂಸಲೇವಿುನಲ್ಲಿ ಉಳಿದವರು ಹರಡಿಕೊಳ್ಳುವರು; ಚೀಯೋನ್ ಪರ್ವತದಲ್ಲಿ ತಪ್ಪಿಸಿಕೊಂಡವರು ಅಭಿವೃದ್ಧಿಹೊಂದುವರು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯಾಕೆಂದರೆ ಸ್ವಲ್ಪಮಂದಿ ಮಾತ್ರವೇ ಜೀವಂತವಾಗಿ ಉಳಿಯುವರು. ಅವರು ಜೆರುಸಲೇಮಿನಿಂದ ಹೊರಟುಹೋಗುವರು. ಉಳಿದವರು ಚೀಯೋನ್ ಪರ್ವತದಿಂದ ಬರುವರು.” ಯೆಹೋವನ ಗಾಢವಾದ ಪ್ರೀತಿಯೇ ಇದನ್ನು ಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:32
13 ತಿಳಿವುಗಳ ಹೋಲಿಕೆ  

ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.


ಮತ್ತು ಆ ದೂತ ಹೀಗೆಂದು ನನಗೆ ಅಪ್ಪಣೆಮಾಡಿದ: “ಇದನ್ನು ನೀನು ಸಾರಿ ಹೇಳಬೇಕು. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - ಜೆರುಸಲೇಮಿನ ಹಾಗೂ ಸಿಯೋನಿನ ಮೇಲೆ ನನಗೆ ತುಂಬ ಅಭಿಮಾನವಿದೆ.


ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆತೋರಿ ಹೀಗೆಂದರು:


ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಆ ದಿನದಂದು ಅಳಿದುಳಿದ ಇಸ್ರಯೇಲರು, ತಪ್ಪಿಸಿಕೊಂಡ ಯಕೋಬ ಮನೆತನದವರು ತಮ್ಮನ್ನು ಬಾಧಿಸಿದವರನ್ನು ನೆಮ್ಮುವುದಿಲ್ಲ. ಬದಲಿಗೆ ಇಸ್ರಯೇಲರ ಪರಮಪಾವನ ಸ್ವಾಮಿಯಾದ ಸರ್ವೇಶ್ವರನನ್ನೇ ನಿಶ್ಚಯವಾಗಿ ಆಶ್ರಯಿಸುವರು.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ.


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು