ಯೆಶಾಯ 37:33 - ಕನ್ನಡ ಸತ್ಯವೇದವು C.L. Bible (BSI)33 “ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು - ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣುದಿಬ್ಬಗಳನ್ನು ಎಬ್ಬಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆತನು ಅಶ್ಶೂರದ ಅರಸನನ್ನು ಕುರಿತು - ಅವನು ಪಟ್ಟಣವನ್ನು ಸಮೀಪಿಸುವದಿಲ್ಲ, ಅದಕ್ಕೆ ಬಾಣವನ್ನೆಸೆಯುವದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವದಿಲ್ಲ, ಅದನ್ನು ಕೆಡವಿಬಿಡುವದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದ್ದರಿಂದ ಯೆಹೋವನು ಅಶ್ಶೂರದ ಅರಸನ ಬಗ್ಗೆ ಹೇಳುವನು: “ಅವನು ಈ ಪಟ್ಟಣದೊಳಗೆ ಬರುವದಿಲ್ಲ. ಅವನು ಒಂದು ಬಾಣವನ್ನೂ ಈ ಪಟ್ಟಣದ ಮೇಲೆ ಹಾರಿಸುವದಿಲ್ಲ. ಅವನು ತನ್ನ ಗುರಾಣಿಗಳನ್ನು ಈ ಪಟ್ಟಣಕ್ಕೆ ತರುವದಿಲ್ಲ. ಈ ಪಟ್ಟಣದ ಗೋಡೆಗಳ ಮೇಲೆ ಆಕ್ರಮಣಮಾಡಲು ಅವನು ದಿಬ್ಬ ಹಾಕುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ಅವನು ಈ ಪಟ್ಟಣದೊಳಗೆ ಬರುವುದಿಲ್ಲ. ಅಲ್ಲಿ ಬಾಣವನ್ನು ಎಸೆಯುವುದಿಲ್ಲ. ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು. ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ. ಅಧ್ಯಾಯವನ್ನು ನೋಡಿ |