Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:37 - ಕನ್ನಡ ಸತ್ಯವೇದವು C.L. Bible (BSI)

37 ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅಶ್ಶೂರದ ಅರಸನಾದ ಸನ್ಹೇರೀಬನು ನಿನೆವೆಗೆ ಹಿಂದಿರುಗಿ ಅಲ್ಲಿಯೇ ಉಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:37
15 ತಿಳಿವುಗಳ ಹೋಲಿಕೆ  

ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು.


“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”


ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು:


ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.


ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು, ಅವನ ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೆ ಕತ್ತಿಗೆ ತುತ್ತಾಗುವಂತೆ ಮಾಡುವೆನು.”


ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.


ಅಸ್ಸೀರಿಯದವರು ಇವರ ಶಸ್ತ್ರಾಸ್ತ್ರಗಳಿಗೆ ತುತ್ತಾಗುವರು. ನಿಮ್ರೋದ್ ಸೀಮೆಯ ಪ್ರವೇಶದ್ವಾರಗಳು ಧ್ವಂಸವಾಗುವುವು. ಅಸ್ಸೀರಿಯದವರು ನಮ್ಮ ನಾಡಿಗೆ ನುಗ್ಗಿ ನಮ್ಮ ಕೋಟೆಯನ್ನು ಆಕ್ರಮಿಸುವಾಗ, ಆ ಶಾಂತಿದಾತನು ನಮ್ಮನ್ನು ರಕ್ಷಿಸುವನು.


ಅಸ್ಸೀರಿಯವನ್ನು ಸರ್ವೇಶ್ವರ ತಮ್ಮ ಭುಜಬಲದಿಂದ ಧ್ವಂಸಮಾಡುವರು; ನಿನೆವೆ ಪಟ್ಟಣವನ್ನು ಹಾಳುಬಿದ್ದ ಅವಶೇಷವಾಗಿ, ನೀರಿಲ್ಲದ ಮರುಭೂಮಿಯಾಗಿ ಮಾಡುವರು.


ಈ ವರದಿಯನ್ನು ಕೇಳಿದ ಹಿಜ್ಕೀಯನು ಕೋಪದಿಂದ ತನ್ನ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು.


ಈ ಧಾರ್ಮಿಕ ಸುಧಾರಣೆಗಳಾದ ನಂತರ ಅಸ್ಸೀರಿಯಾದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಜುದೇಯಕ್ಕೆ ನುಗ್ಗಿದನು. ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಮುತ್ತಿಗೆ ಹಾಕಿದನು.


ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು.


ನಿಮಗೆ ತಿಳಿಯಲಾಗದ ಅನ್ಯಭಾಷೆಯನ್ನು, ನೀವು ಗ್ರಹಿಸಲಾಗದ ಅಸ್ಪಷ್ಟ ಮಾತುಗಳನ್ನು ಆಡುವ ಅಹಂಕಾರದ ಜನರನ್ನು ಇನ್ನು ಮೇಲೆ ಕಾಣಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು