Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:4 - ಕನ್ನಡ ಸತ್ಯವೇದವು C.L. Bible (BSI)

4 ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಶ್ಶೂರದ ಅರಸನು ತನ್ನ ಸೇನಾದಂಡನಾಯಕನು ನಮ್ಮ ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟಮಾತುಗಳನ್ನು ಹೇಳಲು ಕಳುಹಿಸಿರುತ್ತಾನೆ. ನಿನ್ನ ದೇವರಾದ ಯೆಹೋವನು ಇದನ್ನೆಲ್ಲಾ ಕೇಳಿರುವನು. ವೈರಿಗಳು ನುಡಿದ ಆ ಮಾತುಗಳು ಸತ್ಯವಾದವುಗಳಲ್ಲ ಎಂಬುದನ್ನು ಆತನು ತೋರಿಸುವನು. ಆದ್ದರಿಂದ ಇನ್ನೂ ಜೀವದಿಂದ ಉಳಿದಿರುವವರಿಗಾಗಿ ಪ್ರಾರ್ಥಿಸು” ಎಂದು ಹಿಜ್ಕೀಯನು ಹೇಳಿದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:4
43 ತಿಳಿವುಗಳ ಹೋಲಿಕೆ  

ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಅರಸನ ಕೈಯಿಂದ ಬಿಡಿಸಲಾರದೆ ಹೋದಮೇಲೆ ಸರ್ವೇಶ್ವರ ಜೆರುಸಲೇಮನ್ನು ಆತನ ಕೈಯಿಂದ ಬಿಡಿಸಿ ಕಾಪಾಡಲು ಸಾಧ್ಯವೋ?’ ಎಂದು ಕೇಳಿದನು.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ. ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ನಾಡನ್ನು ಬಿಡಿಸಿಕೊಂಡಿದ್ದಾರೆ?


ಬಳಿಕ ಆ ದಳಪತಿಯು ಆ ಗೋಡೆಯ ಮೇಲೆ ನಿಂತಿದ್ದವರನ್ನು ಉದ್ದೇಶಿಸಿ ಹಿಬ್ರು ಭಾಷೆಯಲ್ಲಿ, “ನೀವು ಅಸ್ಸೀರಿಯದ ರಾಜಾಧಿರಾಜನ ಮಾತನ್ನು ಕೇಳಿರಿ;


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ ಸರ್ವೇಶ್ವರನಿಗೆ ದ್ರೋಹಮಾಡಿದ ಇಸ್ರಯೇಲ ಅರಸ ಅಹಾಜನ ನಿಮಿತ್ತ ಸರ್ವೇಶ್ವರ ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದ್ದರು.


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.


ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.


ಅವರು ಸಮುವೇಲನಿಗೆ, “ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀವು ನಮಗೋಸ್ಕರ ಪ್ರಾರ್ಥನೆಮಾಡಿ, ಸುಮ್ಮನಿರಬೇಡಿ,” ಎಂದರು.


ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.


ಆ ದಿನದಂದು ಅಳಿದುಳಿದ ಇಸ್ರಯೇಲರು, ತಪ್ಪಿಸಿಕೊಂಡ ಯಕೋಬ ಮನೆತನದವರು ತಮ್ಮನ್ನು ಬಾಧಿಸಿದವರನ್ನು ನೆಮ್ಮುವುದಿಲ್ಲ. ಬದಲಿಗೆ ಇಸ್ರಯೇಲರ ಪರಮಪಾವನ ಸ್ವಾಮಿಯಾದ ಸರ್ವೇಶ್ವರನನ್ನೇ ನಿಶ್ಚಯವಾಗಿ ಆಶ್ರಯಿಸುವರು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಅರಸ ಹಿಜ್ಕೀಯನ ಸೇವಕರು ತನ್ನ ಬಳಿಗೆ ಬಂದು ವರದಿಮಾಡಿದ ಮೇಲೆ ಯೆಶಾಯನು,


ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ. ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕೋಸ್ಕರ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.


ಅಳಿದುಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.


ಆ ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು, ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು, ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.


“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.


ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.


“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.


“ನಾವು ಬಾಬಿಲೋನಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರುವಂತೆ ಬೇಡಿಕೊಳ್ಳೋಣ,” ಎಂದು ಹೇಳಿದನು.


ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”


“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.


ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು