Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:6 - ಕನ್ನಡ ಸತ್ಯವೇದವು C.L. Bible (BSI)

6 “ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ ಹೀಗೆಂದು ತಿಳಿಸಿರಿ: ‘ಇದು ಸರ್ವೇಶ್ವರನ ನುಡಿ: ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:6
16 ತಿಳಿವುಗಳ ಹೋಲಿಕೆ  

ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು,” ಎಂದರು.


ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು.


ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.


ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನೂ, ನೂರು ಮಂದಿ ಹತ್ತು ಸಾವಿರ ಮಂದಿಯನ್ನೂ ಓಡಿಸುವರು. ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಅರಸ ಹಿಜ್ಕೀಯನ ಸೇವಕರು ತನ್ನ ಬಳಿಗೆ ಬಂದು ವರದಿಮಾಡಿದ ಮೇಲೆ ಯೆಶಾಯನು,


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು