ಯೆಶಾಯ 38:1 - ಕನ್ನಡ ಸತ್ಯವೇದವು C.L. Bible (BSI)1 ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಏಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |