Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:12 - ಕನ್ನಡ ಸತ್ಯವೇದವು C.L. Bible (BSI)

12 ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ ಮಗ್ಗದಿಂದ ಅವನು ದಾರವನ್ನು ಕತ್ತರಿಸುವಂತೆ ಬೆಳಗುಬೈಗಿನೊಳಗೆ ನನ್ನ ಆಯುಷ್ಯವನ್ನು ನೀ ಮುಗಿಸುತ್ತಿರುವೆನೆಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ. ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಮನೆಯು ಅಂದರೆ ನನ್ನ ಕುರುಬನ ಗುಡಾರವು ಕೀಳಲ್ಪಟ್ಟು ನನ್ನಿಂದ ತೆಗೆಯಲ್ಪಡುತ್ತಿದೆ. ಒಬ್ಬನು ಮಗ್ಗದಲ್ಲಿ ಬಟ್ಟೆಯನ್ನು ಸುತ್ತಿ ಕತ್ತರಿಸಿಬಿಡುವಂತೆ ನಾನು ಕತ್ತರಿಸಲ್ಪಟ್ಟಿದ್ದೇನೆ. ನನ್ನ ಆಯುಷ್ಯವನ್ನು ಚಿಕ್ಕ ವಯಸ್ಸಿನಲ್ಲಿಯೇ ಮುಗಿಸಿಬಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲಾಗಿದೆ. ದೇವರು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಹಗಲುರಾತ್ರಿ ದೇವರೇ, ನೀವು ನನ್ನನ್ನು ಅಂತ್ಯಗೊಳಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:12
20 ತಿಳಿವುಗಳ ಹೋಲಿಕೆ  

ಮುದುರಿ ಮೂಲೆಗೆಸೆಯುವೆ ಇವನ್ನು ಮೇಲಂಗಿಯಂತೆ. ಬದಲಾಯಿಸುವೆ ನೀ ಅವನ್ನು ಉಡುಪಿನಂತೆ ನೀನಾದರೋ ಬದಲಾಗದೆ ಇರುವೆ ಮೊದಲಿನಂತೆ. ಮುಗಿವೇ ಇರದು ನಿನ್ನ ಬಾಳುವೆಗೆ,” ಎಂದೂ ಸಹ ದೇವರು ನುಡಿದಿದ್ದಾರೆ.


ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.


ಏಕೆನೆ, ದಿನವಿಡಿ ನಾ ಬಾಧೆಪಡುತ್ತಿರುವೆ I ದಿನದಿನವು ದಂಡನೆಗೆ ಗುರಿಯಾಗುತ್ತಿರುವೆ II


ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ. ನಶ್ವರವಾದುದು ನುಂಗಿಹೋಗಿ ಅಮರವಾದುದು ಉಳಿಯಬೇಕೆಂದೇ ಈ ಗು಼ಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಲು ಅಪೇಕ್ಷಿಸುತ್ತೇವೆ.


ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.


ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.


ಒಳಸಂಚು ಮಾಡುತ್ತಿದ್ದರು ಒಡೆಯರು ಎನಗೆದುರಾಗಿ I ದಾಸ ನಾನಿರುವೆ ನಿನ್ನ ಆಜ್ಞೆಗಳಲೆ ಮಗ್ನನಾಗಿ II


ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II


ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II


“ನನಗೆ ಉಸಿರು ಕಟ್ಟುತ್ತಿದೆ ನನ್ನ ದಿನಗಳು ಮುಗಿದಿವೆ ಸಮಾಧಿ ನನಗಾಗಿ ಕಾದಿದೆ.


ಅರಳಿ ಬಾಡುವನು ಹೂವಿನಂತೆ ನಿಲ್ಲದೆ ಓಡುವನು ನೆರಳಿನಂತೆ.


ದೇವರು ನನ್ನನ್ನು ನಸುಕಿಬಿಡಬಾರದೆ? ತನ್ನ ಕೈಯನ್ನು ಚಾಚಿ ಸಂಹರಿಸಿಬಿಡಬಾರದೆ?


ಅವರು ಉದಯಾಸ್ತಮಾನಗಳ ನಡುವೆ ಜಜ್ಜಿಹೋಗುವರು ಯಾರ ಲಕ್ಷ್ಯವೂ ಇಲ್ಲದೆ ನಿತ್ಯವಿನಾಶ ಹೊಂದುವರು.


ಮನುಜರು ನೀ ಹರಿದೋಡಿಸುವ ಹೊಯಿಲು I ಇರುಳಿನ ಕನಸು, ಹಗಲಿನ ಗರಿಹುಲ್ಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು