ಯೆಶಾಯ 38:14 - ಕನ್ನಡ ಸತ್ಯವೇದವು C.L. Bible (BSI)14 ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಹೊಣೆಯಾಗು ಎಂದು ಮೇಲೆ ಮೇಲೆ ದೃಷ್ಟಿಸುತ್ತಾ ಕಂಗೆಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಪಾರಿವಾಳದಂತೆ ಕೂಗಿಕೊಂಡೆನು. ಪಕ್ಷಿಯಂತೆ ಅರಚಿಕೊಂಡೆನು. ನನ್ನ ಕಣ್ಣುಗಳು ಸ್ವರ್ಗದ ಕಡೆಗೆ ನೋಡುತ್ತಾ ಆಯಾಸಗೊಂಡವು. ನನ್ನ ಒಡೆಯನೇ, ನಾನು ತುಂಬಾ ಚಿಂತಾಕ್ರಾಂತನಾಗಿದ್ದೇನೆ. ನೀನು ನನಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಬಾನಕ್ಕಿಯಂತೆಯೂ, ಬಕದಂತೆಯೂ ಕೀಚುಗುಟ್ಟಿದೆನು. ಪಾರಿವಾಳದಂತೆ ಗುಬ್ಬಳಿಸುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವುದರಿಂದ ಕ್ಷೀಣವಾದವು. ಕರ್ತದೇವರೇ, ನಾನು ಬಾಧೆಪಡುತ್ತಿದ್ದೇನೆ, ನೀವು ನನಗೆ ಆಶ್ರಯರಾಗಿರಿ.” ಅಧ್ಯಾಯವನ್ನು ನೋಡಿ |