Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:15 - ಕನ್ನಡ ಸತ್ಯವೇದವು C.L. Bible (BSI)

15 ನುಡಿದಂತೆ ಪ್ರಭೂ ನೆರವೇರಿಸಿಹನು; ನಾನೇನು ಹೇಳಲಿ; ಮುಳುಗಿದೆ ನನ್ನಾತ್ಮ ದುಃಖಸಾಗರದಲಿ ನಿದ್ರೆಯಿಲ್ಲದೆ ಸೊರಗುತಿದೆ ನನ್ನ ಜೀವಮಾನವಿಡೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ! ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಏನು ಹೇಳಲಿ! ಆತನು ನನಗೆ ಮಾತು ಕೊಟ್ಟು ತಾನೇ ನೆರವೇರಿಸಿದ್ದಾನೆ! ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನೇನು ಹೇಳಲಿ? ನನಗೆ ಸಂಭವಿಸಲಿರುವುದನ್ನು ನನ್ನ ಒಡೆಯನು ತಿಳಿಸಿದ್ದಾನೆ. ನನ್ನ ಒಡೆಯನು ಅದನ್ನು ನೆರವೇರಿಸುತ್ತಾನೆ. ನನ್ನ ಆತ್ಮದಲ್ಲಿ ಸಂಕಟಗಳೆಲ್ಲಾ ತುಂಬಿವೆ. ನಾನು ನನ್ನ ಜೀವಮಾನವೆಲ್ಲಾ ದೀನನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ, ನಾನು ಏನು ಹೇಳಲಿ, ಆತನು ನನಗೆ ಮಾತುಕೊಟ್ಟು, ತಾನೇ ಅದನ್ನು ನೆರವೇರಿಸಿದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ವಿನಯದಿಂದ ನಡೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:15
13 ತಿಳಿವುಗಳ ಹೋಲಿಕೆ  

ಬಾಯಿ ಮುಚ್ಚಿಡಲಾಗದು ನನ್ನಿಂದ ಮಾತಾಡುತ್ತೇನೆ ಆತ್ಮವೇದನೆಯಿಂದ ಪ್ರಲಾಪಿಸುತ್ತೇನೆ ಮನೋವ್ಯಥೆಯಿಂದ.


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.


“ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ಮತ್ತೊಬ್ಬ ಕಿಂಚಿತ್ತೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಪ್ರಾಣಬಿಡುತ್ತಾನೆ.


ಇಷ್ಟು ಉಪಕಾರವನ್ನು ಪಡೆದ ನಾವು ಬೇರೆ ಏನನ್ನು ತಾನೆ ಅರಿಕೆಮಾಡಿಕೊಳ್ಳೋಣ! ನಮ್ಮ ದೇವರೇ, ನಿಮ್ಮ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ, ಅಕಟಾ!


ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.


ಹನ್ನಳು ಬಹು ದುಃಖದಿಂದ ಕಣ್ಣೀರಿಡುತ್ತಾ ಸರ್ವೇಶ್ವರನಲ್ಲಿ ಹೀಗೆಂದು ಪ್ರಾರ್ಥಿಸಿದಳು:


ಸರ್ವೇಶ್ವರಾ, ಇಸ್ರಯೇಲರು ಶತ್ರುಗಳಿಗೆ ಬೆನ್ನು ತೋರಿಸಿದ್ದಾರಲ್ಲಾ! ನಾನು ಏನು ತಾನೇ ಹೇಳಲಿ!


ಸಾರಾಯಿ ಸಾಯುತ್ತಿರುವವನಿಗಿರಲಿ; ಮದ್ಯ, ಮನೋವ್ಯಥೆಪಡುವವನಿಗಿರಲಿ.


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ನನಗಿದೆ ಪ್ರಭುವಿನಲ್ಲಿ ಪ್ರೀತಿ I ಆಲಿಸಿಹನಾತ ನನ್ನ ವಿನಂತಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು