Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರಾ, ಮಾನವನ ಜೀವನ ಇಂತಿದೆ, ಇವುಗಳಿಂದಲೇ ನನ್ನ ಆತ್ಮ ಚೇತನಗೊಳ್ಳುತಿದೆ, ನೀನೀಗ ಗುಣಪಡಿಸು, ನಾ ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ. ಅವುಗಳಿಂದಲೇ ನನ್ನ ಆತ್ಮವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ, ಅವುಗಳಿಂದಲೇ ನನ್ನ ಆತ್ಮವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಒಡೆಯನೇ, ನನ್ನ ಆತ್ಮವು ಪುನರುಜ್ಜೀವಿಸುವಂತೆ ಮಾಡು. ನನ್ನ ಆತ್ಮವು ಬಲಗೊಂಡು ಆರೋಗ್ಯದಾಯಕವಾಗುವಂತೆ ಸಹಾಯಮಾಡು. ನಾನು ತಿರುಗಿ ಸ್ವಸ್ಥತೆ ಹೊಂದುವಂತೆ ಮಾಡು. ನಾನು ಮತ್ತೆ ಜೀವಿಸುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕರ್ತದೇವರೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ. ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು. ಹೀಗೆ ನನ್ನನ್ನು ನೀವು ಸ್ವಸ್ಥಮಾಡಿ ಬದುಕುವಂತೆ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:16
14 ತಿಳಿವುಗಳ ಹೋಲಿಕೆ  

ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.


ಅದಕ್ಕೆ ಯೇಸುಸ್ವಾಮಿ, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ’,” ಎಂದರು.


ನನ್ನ ಪ್ರಾಣ ಸೊರಗಿ ಸುಣ್ಣವಾಗಿದೆಯಯ್ಯಾ I ನಿನ್ನ ವಾಕ್ಯಾನುಸಾರ ಉಜ್ಜೀವಗೊಳಿಸಯ್ಯಾ II


ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?


ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II


ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ನಾ ಕಾಲವಾಗಿ ಕಣ್ಮರೆಯಾಗುವೆ ಇಲ್ಲಿಂದ I ಆ ಮುನ್ನ ಹೊರಳಿಸು ಕೋಪದೃಷ್ಟಿಯನು ನನ್ನಿಂದ I ನಾ ಬಾಳುವಂತೆ ಮಾಡು ಪ್ರಭು, ಸಂತಸದಿಂದ II


ಕಷ್ಟಾನುಭವವೂ ಆಯಿತೆನಗೆ ಹಿತಕರ I ಅದು ತಂದಿತು ನಿನ್ನ ನಿಬಂಧನೆಗಳೆಚ್ಚರ II


ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II


ಪಾತಾಳದಿಂದೆನ್ನ ಪ್ರಾಣವನು ಮೇಲೆತ್ತಿದೆ I ಎನ್ನ ಬದುಕಿಸಿದೆ ದೇವಾ, ಸಮಾಧಿ ಸೇರಗೊಡದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು