Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:17 - ಕನ್ನಡ ಸತ್ಯವೇದವು C.L. Bible (BSI)

17 ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಹಿಂದೆ ಹಾಕಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಗೋ, ನನ್ನ ಸಂಕಟವೆಲ್ಲಾ ಹೊರಟುಹೋಯಿತು. ನನಗೀಗ ಸಮಾಧಾನವಿದೆ. ನೀನು ನನ್ನನ್ನು ಬಹಳವಾಗಿ ಪ್ರೀತಿಸುವದರಿಂದ ನನ್ನ ಶರೀರವು ಸಮಾಧಿಯಲ್ಲಿ ಕೊಳೆಯುವಂತೆ ಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. ನನ್ನ ಪಾಪಗಳನ್ನು ಬಹುದೂರ ಬಿಸಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:17
20 ತಿಳಿವುಗಳ ಹೋಲಿಕೆ  

ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ಪರ್ವತಗಳ ತಳಹದಿಗೆ ದೇವಾ, ನಾನಿಳಿದೆ ಮುಚ್ಚಿಕೊಂಡವು ಜಗದ ದ್ವಾರಗಳು ನನ್ನ ಹಿಂದೆ. ಎನ್ನ ಕಾಪಾಡಿದೆ ಅಂಥ ಕೋಪದಿಂದ ಸರ್ವೇಶ್ವರಾ, ಮೇಲಕ್ಕೆತ್ತಿದೆಯೆನ್ನ ಜೀವಸಹಿತ.


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಪಾತಾಳದಿಂದೆನ್ನ ಪ್ರಾಣವನು ಮೇಲೆತ್ತಿದೆ I ಎನ್ನ ಬದುಕಿಸಿದೆ ದೇವಾ, ಸಮಾಧಿ ಸೇರಗೊಡದೆ II


ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II


ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು I ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು II


ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II


ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II


ಆಗ ನಾನಿಂತೆಂದೆ: ‘ನನ್ನ ಗೂಡಿನಲ್ಲೇ ಹಾಯಾಗಿ ಸಾಯುವೆ ನನ್ನ ದಿನಗಳು ಮರಳಿನಂತೆ ಅಸಂಖ್ಯಾತವಾಗಿರುತ್ತವೆ.’


‘ಇವನನ್ನು ಕಾಪಾಡಿ; ಅಧೋಲೋಕಕ್ಕೆ ತಳ್ಳಬೇಡಿ, ಬಿಡುಗಡೆ ಬೇಕಾದ ಈಡು ಇದೋ ಇಲ್ಲಿ!’ ಎಂದು ಹೇಳಿದರೆ,


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಪಡುವಣದಿಂದ ಮೂಡಣವೆಷ್ಟೋ ದೂರ I ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II


ನುಡಿದಂತೆ ಪ್ರಭೂ ನೆರವೇರಿಸಿಹನು; ನಾನೇನು ಹೇಳಲಿ; ಮುಳುಗಿದೆ ನನ್ನಾತ್ಮ ದುಃಖಸಾಗರದಲಿ ನಿದ್ರೆಯಿಲ್ಲದೆ ಸೊರಗುತಿದೆ ನನ್ನ ಜೀವಮಾನವಿಡೀ.


ಮನ್ನಿಸುವನಾತ ನನ್ನ ದೋಷಗಳನು I ವಾಸಿಮಾಡುವನು ನನ್ನ ರೋಗಗಳನು II


ಉಳಿಸುವನು ಪಾತಾಳದ ಕೂಪದಿಂದ ನನ್ನನು I ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II


ನಂದಿದಂತಾಗಲು ಎನ್ನ ಪ್ರಾಣ ದೀವಿಗೆ ಮೊರೆಯಿಟ್ಟೆ, ಸರ್ವೇಶ್ವರಾ, ನಾ ನಿನಗೆ ನಿನ್ನ ಪರಿಶುದ್ಧ ಆಲಯದಲಿ ನೀನಾಸೀನನಿದ್ದೆ ಎನ್ನ ಪ್ರಾರ್ಥನೆಯನು ನೀನಾಲಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು