Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:18 - ಕನ್ನಡ ಸತ್ಯವೇದವು C.L. Bible (BSI)

18 ಸತ್ತವರು ನಿನ್ನನ್ನು ಕೀರ್ತಿಸರು ಪಾತಾಳದವರು ನಿನ್ನನ್ನು ಸ್ತುತಿಸರು ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯಸಂಧತೆಯನ್ನು ಆಶ್ರಯಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪಾತಾಳದವರು ನಿನ್ನನ್ನು ಸ್ತುತಿಸರು, ಸತ್ತವರು ನಿನ್ನನ್ನು ಕೀರ್ತಿಸರು, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯಸಂಧತೆಯನ್ನು ಆಶ್ರಯಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸತ್ತವರು ನಿನ್ನನ್ನು ಸ್ತುತಿಸುವದಿಲ್ಲ. ಪಾತಾಳದಲ್ಲಿರುವ ಜನರು ನಿನ್ನನ್ನು ಸ್ತುತಿಸುವದಿಲ್ಲ. ಸತ್ತುಹೋದವರು ಸಹಾಯಕ್ಕಾಗಿ ನಿನ್ನ ಮೇಲೆ ಭರವಸವಿಡರು. ಅವರು ಭೂಮಿಯಲ್ಲಿರುವ ಆಳವಾದ ಕುಣಿಗೆ ಸೇರುವರು. ಅವರು ತಿರುಗಿ ಮಾತನಾಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸಮಾಧಿಯು ನಿನ್ನನ್ನು ಹೊಗಳುವುದಿಲ್ಲ. ಮರಣವು ನಿನ್ನನ್ನು ಕೊಂಡಾಡುವುದಿಲ್ಲ. ಕುಣಿಯೊಳಕ್ಕೆ ಹೋಗುವವರು ನಿಮ್ಮ ಸತ್ಯತೆಯಲ್ಲಿ ಭರವಸವಿಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:18
12 ತಿಳಿವುಗಳ ಹೋಲಿಕೆ  

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಸತ್ತವರಲಿ ನಿನ್ನ ಸ್ಮರಿಸುವವರಾರು? I ಪಾತಾಳದಲಿ ನಿನ್ನ ಸ್ತುತಿಸುವವರಾರು?II


“ನನ್ನ ಪ್ರಾಣ ನಷ್ಟದಿಂದ ನಿನಗೇನು ಫಲ? I ಸಮಾಧಿಗೆ ನಾನಿಳಿದರೆ ನಿನಗೇನು ಲಾಭ?” II “ಸತ್ತವರ ಬೂದಿ ನಿನ್ನ ಸ್ತುತಿಸಬಲ್ಲುದೆ? I ನಿನ್ನ ಸತ್ಯತೆಯನ್ನದು ಸಾರಲು ಬಲ್ಲುದೆ?” II


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಅವರು ಸಜೀವರಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಇಳಿದುಬಿಟ್ಟರು. ಭೂಮಿ ಅವರನ್ನು ಮುಚ್ಚಿಕೊಂಡಿತು.


ನನ್ನ ಮೊರೆ ಕೇಳು ಪ್ರಭು, ದುರ್ಗ ನೀನೆನಗೆ I ನೀ ಕಿವಿಗೊಡದಿರೆ, ನಾ ಸಮಾನ ಸತ್ತವರಿಗೆ II


ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು