Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:19 - ಕನ್ನಡ ಸತ್ಯವೇದವು C.L. Bible (BSI)

19 ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಜೀವಂತನು ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಹಾಗೆ ಈ ದಿನ ಜೀವಿಸುವವರೆಲ್ಲಾ ನಿನ್ನನ್ನು ಕೊಂಡಾಡುವರು. ತಂದೆಯು ತನ್ನ ಮಕ್ಕಳಿಗೆ ನಿನ್ನ ಮೇಲೆ ಭರವಸವಿಡಲು ಕಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು. ಹೌದು, ಜೀವಂತನಾದ ನಾನೇ ಈ ಹೊತ್ತು ನಿಮ್ಮನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿಮ್ಮ ನಿಷ್ಠೆಯನ್ನು ಬೋಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:19
17 ತಿಳಿವುಗಳ ಹೋಲಿಕೆ  

ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.


ಉಳಿಸೆನ್ನ ಪ್ರಾಣವನು, ಭಜಿಪೆ ನಿನ್ನನು I ನೀಡಲಿ ಎನಗೆ ನಿನ್ನ ವಿಧಿಗಳು ನೆರವನು II


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ; ಅವರು ತಮ್ಮ ಮಕ್ಕಳಿಗೆ ತಿಳಿಸಲಿ; ಅವರ ಮಕ್ಕಳು ಮುಂದಿನ ತಲೆಮಾರಿಗೆ ತಿಳಿಸಲಿ.


ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು I ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು II


ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು I ತಿಳಸುವುದು ಪ್ರಭು, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು II


ಸಾಯೆನು, ಜೀವದಿಂದಿರುವೆನು ನಾನು I ಪ್ರಭುವಿನ ಕಾರ್ಯಗಳನು ಸಾರುವೆನು II


ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಹಗಲಿರುವಾಗಲೇ ನನ್ನನ್ನು ಕಳುಹಿಸಿದಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸ ಮಾಡಲಾಗದು.


ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.


ಹೋರೇಬಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ನಿಂತಿದ್ದಾಗ ಅವರು ನನಗೆ, ‘ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕರೆ; ಅವರೇ ನನ್ನ ಆಜ್ಞೆಗಳನ್ನು ಕೇಳಿಸಿಕೊಳ್ಳಲಿ; ಆಗ ಅವರು ತಮ್ಮ ಜೀವಮಾನದಲ್ಲೆಲ್ಲಾ ನನ್ನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು; ಅಂತೆಯೇ ತಮ್ಮ ಮಕ್ಕಳಿಗೂ ಕಲಿಸಿಕೊಡುವರು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು