Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರಾ, ನೀ ನನ್ನ ಉದ್ಧಾರಕ ಹೊಗಳುವೆ ನಿನ್ನ ನಾ ತಂತಿವಾದ್ಯ ಸಮೇತ ದಿನನಿತ್ಯ, ನಿನ್ನಾಲಯದೊಳು, ಜೀವವಿರುವ ತನಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ನನಗೆ ರಕ್ಷಣಾಪರನಾಗಿದ್ದಾನೆ. ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ನನಗೆ ರಕ್ಷಣಪರನಾಗಿದ್ದಾನಷ್ಟೆ; ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಹೇಳುವುದೇನೆಂದರೆ: “ಯೆಹೋವನು ನನ್ನನ್ನು ರಕ್ಷಿಸಿದನು. ನಮ್ಮ ಜೀವಮಾನದ ಕಾಲವೆಲ್ಲಾ ಯೆಹೋವನ ಆಲಯದಲ್ಲಿ ನಾವು ಹಾಡುತ್ತಾ ವಾದ್ಯಬಾರಿಸುತ್ತಾ ಆತನನ್ನು ಸ್ತುತಿಸುವೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ನನ್ನನ್ನು ರಕ್ಷಿಸುವರು. ಆದ್ದರಿಂದ ಯೆಹೋವ ದೇವರ ಆಲಯದಲ್ಲಿ ನಮ್ಮ ಜೀವಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ನಮ್ಮ ಹಾಡುಗಳನ್ನು ನಾವು ಹಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:20
19 ತಿಳಿವುಗಳ ಹೋಲಿಕೆ  

ಆತನೆನ್ನ ಮೊರೆಗೆ ಕಿವಿಗೊಟ್ಟ ನಿಮಿತ್ತ I ವಿಜ್ಞಾಪಿಸುವೆ ಜೀವಮಾನ ಪರಿಯಂತ II


ಆತನನ್ನು ಸ್ತುತಿಸಿರಿ ತಮಟೆ ಬಡಿಯುತಾ ಕುಣಿಯುತಾ I ಆತನನ್ನು ಸ್ತುತಿಸಿರಿ ತಂತಿವಾದ್ಯ ನುಡಿಸುತಾ ಕೊಳಲೂದುತಾ II


ಹೊಗಳುವೆನು ನಾ ದಿನದಿನವೂ ನಿನ್ನನು I ಭಜಿಸುವೆನೆಂದೆಂದಿಗೂ ನಿನ್ನ ಹೆಸರನು II


ಸ್ವಾಮಿ ಸರ್ವೇಶ್ವರ ನೀಡುವನೆನಗೆ ಧೀರತೆ ಚುರುಕುಗೊಳಿಸುವನಾತ ನನ್ನ ಕಾಲುಗಳನು ಜಿಂಕೆಯಂತೆ ಮಾಡುವನು ಬೆಟ್ಟಗುಡ್ಡಗಳಲಿ ನಾನು ಓಡಾಡುವಂತೆ.


ಮುಂಗಡೆಯಲಿದೋ ಹಾಡುಗಾರರು I ಹಿಂಗಡೆಯಲಿದೋ ವಾದ್ಯಗಾರರು I ನಡುವೆ ದಮ್ಮಡಿ ಬಡಿವ ಮಹಿಳೆಯರು II


ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II


ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ I ಕೀರ್ತಿಸಿ ದಶತಂತಿ ವೀಣೆಯನು ಬಾರಿಸುತ II


ಸಜ್ಜನರೇ, ಮಾಡಿರಿ ಪ್ರಭುವಿನ ಗುಣಗಾನ I ನೀತಿವಂತರೇ, ಆತನ ಸ್ತುತಿ ನಿಮಗೆ ಸುಗುಣ II


ಕಂಗೊಳಿಸುತಿದೆ ದೇವ, ನಿನ್ನ ಭವ್ಯ ಮೆರವಣಿಗೆ I ನನ್ನರಸ ದೇವನು ನಡೆವ ತನ್ನಾ ಗರ್ಭಗುಡಿಗೆ II


ಪ್ರಭುವನು ನಾ ಹೊಗಳಿ ಹಾಡುವೆನು ಬಾಳಿನೊಳೆಲ್ಲ I ನನ್ನ ದೇವನನು ಭಜಿಸುವೆನು ನಾ ಜೀವಮಾನವೆಲ್ಲ II


ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು I ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು II


ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ I ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ II


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಸರ್ವೇಶ್ವರಸ್ವಾಮಿಯ ಆಜ್ಞೆಯ ಪ್ರಕಾರ ಆ ಮೀನು ಯೋನನನ್ನು ದಡದ ಮೇಲೆ ಕಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು