ಯೆಶಾಯ 38:8 - ಕನ್ನಡ ಸತ್ಯವೇದವು C.L. Bible (BSI)8 ಇಗೋ, ಅಹಾಜನು ಕಟ್ಟಿಸಿದ ನೆರಳು ಗಡಿಯಾರದಲ್ಲಿ ಸೂರ್ಯನ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡುವರು,” ಎಂದು ತಿಳಿಸಿದನು. ಅಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು’ ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು” ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬದಾಗಿ ತಿಳಿಸು ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇಗೋ, ಆಹಾಜನ ಮೆಟ್ಟಿಲಲ್ಲಿರುವ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಹೋಗುವಂತೆ ಮಾಡುವೆನು ಎಂದು ನಿನ್ನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬದಾಗಿ ತಿಳಿಸು” ಎಂದು ಹೇಳಿದನು. ಅದರಂತೆ ಮೆಟ್ಟಿಲಲ್ಲಿರುವ ಸೂರ್ಯನ ನೆರಳು ಹತ್ತು ಮೆಟ್ಟಿಲು ಹಿಂದಕ್ಕೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವುದು,’ ” ಎಂದನು. ಅದರಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು. ಅಧ್ಯಾಯವನ್ನು ನೋಡಿ |