ಯೆಶಾಯ 39:2 - ಕನ್ನಡ ಸತ್ಯವೇದವು C.L. Bible (BSI)2 ಹಿಜ್ಕೀಯನು ಆ ದೂತರನ್ನು ಸಂತೋಷದಿಂದ ಬರಮಾಡಿಕೊಂಡು ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿಂದ ಕೂಡಿದ ಕರಂಡಗಳನ್ನು, ಆಯುಧ ಶಾಲೆಯನ್ನು ಮತ್ತು ತನ್ನ ಭಂಡಾರದಲ್ಲಿದ್ದ ಒಡವೆವಸ್ತುಗಳನ್ನು ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಇದ್ದ ಸಮಸ್ತವನ್ನು ತೋರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧ ದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧ ಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವುಗಳನ್ನು ನೋಡಿ ಹಿಜ್ಕೀಯನಿಗೆ ಬಹು ಸಂತೋಷವಾಯಿತು. ಅವನು ಬಾಬಿಲೋನಿನ ದೂತರಿಗೆ ತನ್ನ ಅರಮನೆಯ ಉಗ್ರಾಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನೂ ತಾನು ಕೊಡಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೂ ಸಾಂಬಾರ ಪದಾರ್ಥಗಳನ್ನೂ ಮತ್ತು ಸುಗಂಧದ್ರವ್ಯಗಳನ್ನೂ ತೋರಿಸಿದನು. ಅಲ್ಲದೆ ಯುದ್ಧದಲ್ಲಿ ಉಪಯೋಗಿಸುವ ಖಡ್ಗಗಳನ್ನು, ಗುರಾಣಿಗಳನ್ನು ತೋರಿಸಿದನು; ಅಲ್ಲದೆ ತನ್ನ ರಾಜ್ಯದಲ್ಲಿರುವ ಪ್ರತಿಯೊಂದು ವಿಷಯಗಳನ್ನು ಅವರಿಗೆ ಪ್ರದರ್ಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹಿಜ್ಕೀಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. ಅಧ್ಯಾಯವನ್ನು ನೋಡಿ |