Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 39:4 - ಕನ್ನಡ ಸತ್ಯವೇದವು C.L. Bible (BSI)

4 ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನೇನನ್ನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿ ಇರುವುದೆಲ್ಲವನ್ನು ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದ ಒಡವೆ ವಸ್ತು ಒಂದೂ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಶಾಯನು ತಿರುಗಿ ಹಿಜ್ಕೀಯನಿಗೆ, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಶಾಯನು ತಿರಿಗಿ ಅವನನ್ನು - ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು ಎಂದು ಕೇಳಲು ಅವನು - ಅರಮನೆಯಲ್ಲಿರುವದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಿನ್ನ ಮನೆಯಲ್ಲಿ ಅವರು ಏನು ನೋಡಿದರು?” ಎಂದು ತಿರುಗಿ ಯೆಶಾಯನು ಪ್ರಶ್ನಿಸಿದನು. “ಅವರು ನನ್ನ ಅರಮನೆಯಲ್ಲಿರುವದನ್ನೆಲ್ಲಾ ನೋಡಿದರು. ನಾನು ನನ್ನ ಐಶ್ವರ್ಯವನ್ನೆಲ್ಲಾ ಅವರಿಗೆ ತೋರಿಸಿದೆನು” ಎಂದು ಹಿಜ್ಕೀಯನು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 39:4
8 ತಿಳಿವುಗಳ ಹೋಲಿಕೆ  

ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ಜನಸಮುದಾಯಕ್ಕೆ ನಾನು ಹೆದರಿದ್ದರೆ ಕುಲೀನರ ತಿರಸ್ಕಾರಕ್ಕೆ ನಾನು ಬೆದರಿದ್ದರೆ,


ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು


ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ದೂತರು ಎಲ್ಲಿಯವರು? ಏನು ಕೇಳಿದರು?” ಎಂದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ನಾಡಾದ ಬಾಬಿಲೋನಿಯದಿಂದ ಬಂದವರು,” ಎಂದು ಉತ್ತರಕೊಟ್ಟನು.


ಆಗ ಯೆಶಾಯನು ಅವನಿಗೆ, “ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಈ ಮಾತನ್ನು ಕೇಳು :


ನಿಮ್ಮ ಪ್ರಾಂತ್ಯಗಳಲ್ಲೆಲ್ಲ ನೀವು ಮಾಡಿದ ಪಾಪದ ನಿಮಿತ್ತ ನಾನು ನಿಮ್ಮ ಎಲ್ಲ ಸೊತ್ತುಸಂಪತ್ತುಗಳನ್ನು ಮತ್ತು ಪೂಜಾಸ್ಥಳಗಳನ್ನು ಸೂರೆಗೆ ಈಡುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು