Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 39:6 - ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಕೂಡಿಸಿಟ್ಟ ಎಲ್ಲವನ್ನು ಬಾಬಿಲೋನಿಯಾಗೆ ಕೊಂಡೊಯ್ಯುವ ದಿನ ಬರುವುದು; ಇಲ್ಲಿ ಏನೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು - ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿನ ಬರುವದು; ಇಲ್ಲೇನೂ ಉಳಿಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ‘ನಿನ್ನ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ನಿನ್ನ ಪೂರ್ವಿಕರು ಕೂಡಿಟ್ಟಿದ್ದ ಎಲ್ಲಾ ವಸ್ತುಗಳೂ ಇಲ್ಲಿಂದ ಬಾಬಿಲೋನಿಗೆ ಒಯ್ಯುವ ಕಾಲವು ಬರುವದು. ಇಲ್ಲಿ ಏನೂ ಉಳಿಯುವದಿಲ್ಲ.’ ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವ ದೇವರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 39:6
11 ತಿಳಿವುಗಳ ಹೋಲಿಕೆ  

ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.


ಅಷ್ಟು ಮಾತ್ರವಲ್ಲ, ಈ ನಗರದ ಎಲ್ಲ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಹಾಗು ಜುದೇಯದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಇವರ ಶತ್ರುಗಳ ಕೈವಶಮಾಡುವೆನು. ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.


ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ದೇವಾಲಯದ ಎಲ್ಲ ಚಿಕ್ಕ ದೊಡ್ಡ ಸಾಮಗ್ರಿಗಳನ್ನು ಮಾತ್ರವಲ್ಲದೆ,ಸರ್ವೇಶ್ವರನ ಮಂದಿರಕ್ಕೆ ಸೇರಿದ ಭಂಡಾರದ ಹಾಗು ಅರಸನ ಮತ್ತು ಅವನ ಪದಾಧಿಕಾರಿಗಳ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


ನಿನ್ನ ವಸ್ತ್ರಗಳನ್ನು ಸೆಳೆದು, ನಿನ್ನ ಚಂದದ ಒಡವೆಗಳನ್ನು ಕಳಚಿಬಿಡುವರು.


ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಯೇಲರಲ್ಲಿ, ಅಂದರೆ ರಾಜವಂಶೀಯರಲ್ಲಿ ಮತ್ತು ಪ್ರಧಾನರಲ್ಲಿ ಕೆಲವು ಯುವಕರನ್ನು ಇಲ್ಲಿಗೆ ಕರೆದು ಬಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು