ಯೆಶಾಯ 4:1 - ಕನ್ನಡ ಸತ್ಯವೇದವು C.L. Bible (BSI)1 ಆ ಕಾಲ ಬಂದಾಗ ಏಳುಮಂದಿ ಅವಿವಾಹಿತ ಮಹಿಳೆಯರು ಒಬ್ಬ ಪುರುಷನನ್ನು ಹಿಡಿದುಕೊಂಡು: “ನಾವು ಸ್ವಂತವಾಗಿ ದುಡಿದು ಊಟಮಾಡುತ್ತೇವೆ, ಸ್ವಂತವಾಗಿ ಸಂಪಾದನೆಮಾಡಿ ಬಟ್ಟೆ ಉಡುತ್ತೇವೆ. ನೀನು ನಮ್ಮ ಯಜಮಾನನೆನಿಸಿಕೊಂಡು ನಮ್ಮ ಮಾನವನ್ನು ಕಾಪಾಡಿದರೆ ಸಾಕು,” ಎಂದು ಕೋರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು; ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು; ನಮ್ಮ ಅವಮಾನವನ್ನು ನೀಗಿಸಿಬಿಡು ಎಂದು ಕೇಳಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ದಿವಸದಲ್ಲಿ ಏಳುಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದು ಉಣ್ಣುವೆವು, ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು, ನಮ್ಮ ನಿಂದೆಯನ್ನು ನೀಗಿಸುವುದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು,” ಎಂದು ಕೇಳಿಕೊಳ್ಳುವರು. ಅಧ್ಯಾಯವನ್ನು ನೋಡಿ |