Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 4:2 - ಕನ್ನಡ ಸತ್ಯವೇದವು C.L. Bible (BSI)

2 ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ದಿನದಲ್ಲಿ ಯೆಹೋವನು ದಯಪಾಲಿಸುವ ಬೆಳೆಯಿಂದ ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಸೌಂದರ್ಯವೂ ಮಹಿಮೆಯೂ ಉಂಟಾಗುವವು, ದೇಶದ ಫಲದಿಂದ ಉನ್ನತಿಯೂ ಭೂಷಣವೂ ಲಭಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 4:2
40 ತಿಳಿವುಗಳ ಹೋಲಿಕೆ  

ಮತ್ತು ಅವನಿಗೆ ಹೀಗೆಂದು ಹೇಳು: ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮೊಳಕೆಯೆಂಬ ಪುರುಷನು ಮೂಡುವನು! ಆತನು ಇದ್ದ ಸ್ಥಳದಲ್ಲಿಯೇ ಅರಳಿ ಸರ್ವೇಶ್ವರನ ಆಲಯವನ್ನು ಕಟ್ಟಿಸುವನು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.


ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


ಸಮೃದ್ಧಿಯಾಗಲಿ ನಾಡಿನ ದವಸಧಾನ್ಯ ನೆಲಮಲೆಗಳ ಮೇಲೆ I ಸೊಂಪಾಗಲಿ ಅದರ ಹಣ್ಣುಹಂಪಲು ಲೆಬನೋನಿನ ಮರಗಳಂತೆ I ಹುಲುಸಾಗಲಿ ನಗರ ನಿವಾಸಿಗಳ ಸಂಖ್ಯೆ ಬಯಲಿನ ಹುಲ್ಲಿನಂತೆ II


ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.


ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.


ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’


ವರ್ಷಿಸಲಿ ಸದ್ಧರ್ಮವನು ಆಕಾಶಮಂಡಲ ಸುರಿಸಲಿ ಮೇಲಿಂದ ಅದನ್ನು ಆ ಗಗನಮಂಡಲ; ಅಂಕುರಿಸಲಿ ಜೀವೋದ್ಧಾರವನು ಭೂಮಂಡಲ ಬೆಳೆಯಲಿ ಅದರೊಡನೆಯೇ ಸದ್ಧರ್ಮದ ಫಲ, ಸರ್ವೇಶ್ವರನಾದ ನಾನೇ ಕರ್ತ ಇದಕ್ಕೆಲ್ಲಾ.”


ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಇತ್ತನೆಮ್ಮ ದೇವನು ಆಶೀರ್ವಾದವನು I ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು II


ನಿನ್ನ ಅಣ್ಣ ಆರೋನನಿಗೆ ತಕ್ಕ ಗೌರವ ಹಾಗು ಶೋಭೆ ತರುವಂಥ ದೀಕ್ಷಾವಸ್ತ್ರಗಳನ್ನು ಮಾಡಿಸು.


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.


ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.


ಇಸ್ರಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಯೇಲರಿಗೆ ಫಲಕೊಡುವುವು; ಅವರ ಬರುವಿಕೆ ಸಮೀಪವಾಯಿತು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು