Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 4:3 - ಕನ್ನಡ ಸತ್ಯವೇದವು C.L. Bible (BSI)

3 ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮತ್ತು ಚೀಯೋನಿನಲ್ಲಿ ಉಳಿದವರು, ಯೆರೂಸಲೇವಿುನಲ್ಲಿ ನಿಂತವರು, ಅಂತು ಜೀವಬಾಧ್ಯರ ಪಟ್ಟಿಯಲ್ಲಿ ಹೆಸರುಬಿದ್ದ ಯೆರೂಸಲೇವಿುನವರೆಲ್ಲರೂ ದೇವರ ಜನರೆನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 4:3
33 ತಿಳಿವುಗಳ ಹೋಲಿಕೆ  

ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಅಂತೆಯೇ, ದೈವಾನುಗ್ರಹದಿಂದ ಆಯ್ಕೆಯಾದ ಸ್ವಲ್ಪಮಂದಿ ಈಗಲೂ ಉಳಿದಿದ್ದಾರೆ.


ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.”


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.


ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ಸಿಯೋನಿನ ಉದ್ಧಾರ ನ್ಯಾಯನೀತಿಯಿಂದ; ಅದಕ್ಕೆ ಹಿಂದಿರುಗುವವರ ಉದ್ಧಾರ ಸತ್ಸಂಬಂಧದಿಂದ;


ಅದಕ್ಕೆ ಆತನಿಗೆ ದೊರೆತ ಉತ್ತರವಾದರೂ ಏನು? “ಬಾಳ್‍ದೇವತೆಯ ವಿಗ್ರಹಕ್ಕೆ ಅಡ್ಡಬೀಳದ ಏಳುಸಾವಿರ ಜನರನ್ನು ನನಗಾಗಿ ಉಳಿಸಿಕೊಂಡಿದ್ದೇನೆ,” ಎಂದಲ್ಲವೆ?


ಪ್ರಭು ಪಟ್ಟಿಮಾಡುವಾಗ ಸಕಲ ಜಾತಿಜನಾಂಗಗಳನು I ನಿನ್ನ ಜನಾಂಗವೆಂದೇ ಪರಿಗಣಿಸುವನು ಪ್ರತಿಯೊಂದನು II


ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು