Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:13 - ಕನ್ನಡ ಸತ್ಯವೇದವು C.L. Bible (BSI)

13 ಆದೇಶವಿತ್ತವನಾರು ಸರ್ವೇಶ್ವರನ ಆತ್ಮಕೆ? ಉಪದೇಶವಿತ್ತ ಸಲಹೆಗಾರನಾರು ಆತನಿಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ಆತ್ಮಕ್ಕೆ ಯಾವನು ವಿಧಿಯನ್ನು ನೇವಿುಸಿದನು? ಯಾವನು ಆಲೋಚನಾಕರ್ತನಾಗಿ ಆತನಿಗೆ ಉಪದೇಶಿಸಿದನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನ ಆತ್ಮಕ್ಕೆ ಆತನು ಮಾಡಬೇಕಾದದ್ದನ್ನು ತಿಳಿಸಿದವರು ಯಾರೂ ಇಲ್ಲ. ಆತನು ಮಾಡಿದ ಕಾರ್ಯಗಳನ್ನು ಹೀಗೆ ಮಾಡಬೇಕೆಂದು ಹೇಳಿದವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರ ಮನಸ್ಸನ್ನು ಅರ್ಥ ಮಾಡಿಕೊಂಡವನು ಯಾರು? ಸಲಹೆಗಾರನಾಗಿ ಅವರಿಗೆ ಬೋಧಿಸಿದವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:13
10 ತಿಳಿವುಗಳ ಹೋಲಿಕೆ  

“ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.


“ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು?


ದೇವರಿಗೆ ಜ್ಞಾನಬೋಧೆ ಮಾಡಬಲ್ಲವನು ಇದ್ದಾನೆಯೇ? ಉನ್ನತರಿಗೂ ನ್ಯಾಯತೀರಿಸುವಂಥವನು ಆತನೇ ಅಲ್ಲವೇ?


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.


ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು.


ನಾ ನೋಡಲು ಅವರಲ್ಲಿ ಸಮರ್ಥರಾರು ಇಲ್ಲ ನಾ ಪ್ರಶ್ನಿಸಲು ಉತ್ತರಿಸಬಲ್ಲ ವಿವೇಕಿ ಇಲ್ಲ.


ಇವರಲ್ಲಿ ಯಾರು ತಾನೆ ಸರ್ವೇಶ್ವರನ ಆಲೋಚನಾ ಸಭೆಯಲ್ಲಿ ಹಾಜರಿದ್ದರು? ಸರ್ವೇಶ್ವರನ ವಾಕ್ಯವನ್ನು ಕೇಳಿ ತಿಳಿದುಕೊಂಡವನಾರು? ಆ ವಾಕ್ಯಕ್ಕೆ ಲಕ್ಷ್ಯಕೊಟ್ಟು ಗ್ರಹಿಸಿಕೊಂಡವನಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು