Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:15 - ಕನ್ನಡ ಸತ್ಯವೇದವು C.L. Bible (BSI)

15 ಆತನ ಗಣನೆಗೆ ರಾಷ್ಟ್ರಗಳು ಕಪಿಲೆಯಿಂದ ಉದುರುವ ತುಂತುರುಗಳು ತ್ರಾಸಿನ ತಟ್ಟೆಯ ಮೇಲಿರುವ ಧೂಳಿನ ಕಣಗಳು ದ್ವೀಪಗಳೋ ಆತನ ತೂಕಕ್ಕೆ ಅಣುರೇಣುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದುದುರುವ ತುಂತುರಿನಂತೆಯೂ ತ್ರಾಸಿನ ತಟ್ಟೆಯ ದೂಳಿನ ಹಾಗೂ ಇರುತ್ತವೆ; ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ. ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ ಅವು ಧೂಳಿನ ಕಣದಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:15
17 ತಿಳಿವುಗಳ ಹೋಲಿಕೆ  

ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.


ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.


ಆಮೇಲೆ ಅವನು ಕರಾವಳಿಯ ನಾಡುಗಳ ಕಡೆಗೆ ಕಣ್ಣಿಟ್ಟು ಅಲ್ಲಿಯ ಅನೇಕ ನಾಡುಗಳನ್ನು ಆಕ್ರಮಿಸುವನು. ಆದರೆ ದಳವಾಯಿ ಒಬ್ಬನು ಅವನ ಅಟ್ಟಹಾಸವನ್ನು ತಡೆಗಟ್ಟುವನು. ಅವನು ಮಾಡುವ ಹಾನಿ ಅವನಿಗೇ ತಗಲುವಂತೆ ಮಾಡುವನು.


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ದೂರದೇಶದವರು ಕಂಡು ಬೆರಗಾದರು ಭೂಮಿಯ ಕಟ್ಟಕಡೆಯವರು ನಡುಗಿದರು ಎಲ್ಲರೂ ಇಲ್ಲಿಗೆ ನೆರೆದುಬಂದಿಹರು.


ದೇಶ - ಭಾಷಾ - ಕುಲ - ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು