Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:18 - ಕನ್ನಡ ಸತ್ಯವೇದವು C.L. Bible (BSI)

18 ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗಿರಲು ದೇವರನ್ನು ಯಾರಿಗೆ ಹೋಲಿಸೀರಿ? ಯಾವ ರೂಪವನ್ನು ಆತನಿಗೆ ಸಮಮಾಡೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರನ್ನು ಬೇರೆ ಯಾವುದಕ್ಕಾದರೂ ಹೋಲಿಸಬಹುದೇ? ದೇವರ ಚಿತ್ತವನ್ನು ಬರೆಯಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:18
24 ತಿಳಿವುಗಳ ಹೋಲಿಕೆ  

ನನ್ನನ್ನು ಯಾರಿಗೆ ಸರಿಹೋಲಿಸಬಲ್ಲಿರಿ? ನನ್ನನ್ನು ಯಾರಿಗೆ ಸಾಟಿಮಾಡಬಲ್ಲಿರಿ?


ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


“ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು.


“ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ.


ಹೇ ಸರ್ವೇಶ್ವರಾ, ನಿಮಗೆ ಸಮಾನನು ಇಲ್ಲ, ನೀವು ಮಹೋತ್ತಮರು ಸಾಮರ್ಥ್ಯದಿಂದ ಕೂಡಿರುವ ನಿಮ್ಮ ನಾಮವೂ ಮಹತ್ತರವಾದುದು.


ಮೇಘಮಂಡಲದಲಿ ಸಮಾನನಾರು ಪ್ರಭುವಿಗೆ I ದೇವದೂತರೊಳು ಹೋಲಿಕೆ ಯಾವುದು ಆತನಿಗೆ II


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಪ್ರಭೂ, ಶಕ್ತಿಸ್ವರೂಪ, ನಿನ್ನ ಸುತ್ತುವರೆದಿದೆ ಸತ್ಯತೆ I ಸ್ವಾಮಿದೇವಾ, ಸರ್ವೇಶ್ವರಾ, ನಿನಗೆಲ್ಲಿಯದು ಸಮಾನತೆ? II


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಅವನು, “ನಾಳೆಯೇ ಆಗಲಿ” ಎಂದನು. ಅದಕ್ಕೆ ಮೋಶೆ, “ತಮ್ಮ ಮಾತಿನ ಪ್ರಕಾರವೇ ಆಗುವುದು.


ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.


ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು.


ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I ಉನ್ನತದಲಿ ಆಸನಾರೂಢನು ಆತ I ಇಹಪರಗಳನು ವೀಕ್ಷಿಸಲಾತ ಶಕ್ತ II


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


“ಹೋರೇಬಿನಲ್ಲಿ” ಸರ್ವೇಶ್ವರ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದರು. ಆಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ಬಹಳ ಎಚ್ಚರಿಕೆಯಿಂದಿರಿ.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಇಸ್ರಯೇಲ್ ವಂಶದವರೇ, ಸರ್ವೇಶ್ವರ ಸ್ವಾಮಿ ನಿಮಗೆ ನುಡಿಯುವ ಮಾತನ್ನು ಕೇಳಿರಿ; ಅವರು ಹೇಳುವುದು ಇದು :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು