Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:19 - ಕನ್ನಡ ಸತ್ಯವೇದವು C.L. Bible (BSI)

19 ವಿಗ್ರಹವಾದರೋ ಎರಕ ಹೊಯ್ಯಲ್ಪಟ್ಟಿತು ಶಿಲ್ಪಿಯಿಂದ ಅದಕ್ಕೆ ಬಡಿದಿರುವ ಚಿನ್ನದ ಕವಚ ಅಕ್ಕಸಾಲಿಗನಿಂದ ಅದಕ್ಕೆ ತೊಡಿಸಿರುವ ಬೆಳ್ಳಿಸರಪಣಿ ಆ ವಾಜನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ವಿಗ್ರಹವಾದರೋ ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಬಡಿದು ಬೆಳ್ಳಿಯ ಸರಪಣಿಗಳನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇಲ್ಲ, ಆದರೆ ಕೆಲವರು ವಿಗ್ರಹಗಳನ್ನು ಕಲ್ಲಿನಿಂದ ಅಥವಾ ಮರದಿಂದ ತಯಾರಿಸುತ್ತಾರೆ. ಅವುಗಳನ್ನು ಅವರು ದೇವರು ಎಂದು ಕರೆಯುತ್ತಾರೆ. ಒಬ್ಬನು ಒಂದು ವಿಗ್ರಹವನ್ನು ಮಾಡುತ್ತಾನೆ. ಇನ್ನೊಬ್ಬನು ಅದಕ್ಕೆ ಬಂಗಾರದ ತಗಡನ್ನು ಹೊದಿಸುತ್ತಾನೆ ಮತ್ತು ಬೆಳ್ಳಿಹಾರವನ್ನು ಮಾಡಿಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ. ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:19
17 ತಿಳಿವುಗಳ ಹೋಲಿಕೆ  

ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು.


ಮಗನು ಹಿಂದಕ್ಕೆ ಕೊಟ್ಟ ನಾಣ್ಯಗಳಲ್ಲಿ ಇನ್ನೂರು ನಾಣ್ಯಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲೇ ಇಟ್ಟುಕೊಂಡನು.


ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು.


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ಅವುಗಳಂತಾಗುವರು ಅವುಗಳನ್ನು ಮಾಡುವವರು I ಅವುಗಳಂತಾಗುವರು ಅವುಗಳನ್ನು ನಂಬುವವರು II


ರಾಷ್ಟ್ರಗಳ ವಿಗ್ರಹಗಳು ಬರೀ ಬೆಳ್ಳಿಬಂಗಾರ I ಅವುಗಳೆಲ್ಲ ಮಾನವನ ಕೈಕೆಲಸಗಳು ಮಾತ್ರ II


ದೇಶದಲ್ಲಿ ವಿಗ್ರಹಗಳು ತುಂಬಿ ತುಳುಕುತ್ತಿವೆ. ಜನರು ತಮ್ಮ ಕೈಯಿಂದ ಮಾಡಿದ ವಿಗ್ರಹಗಳನ್ನೇ ಪೂಜಿಸುತ್ತಿದ್ದಾರೆ.


ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.


ಕುಡಿದುಕೊಂಡೇ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ತಮ್ಮ ದೇವರುಗಳನ್ನು ಆರಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು