ಯೆಶಾಯ 40:20 - ಕನ್ನಡ ಸತ್ಯವೇದವು C.L. Bible (BSI)20 ಇಷ್ಟು ಹಣವನ್ನು ವೆಚ್ಚ ಮಾಡಲಾಗದ ಬಡವನು ಹುಡುಕುವನು ಹುಳಿತುಹೋಗದ ಮರವನು ಬಾಗಿ ಬೀಳದ ವಿಗ್ರಹವನ್ನು ಮಾಡಬಲ್ಲಾ ಕುಶಲನನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 (ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 [ಇಂಥದನ್ನು ದೇವರಿಗೆ] ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು ಹುಳಿತುಹೋಗದ ಮರವನ್ನು ಹುಡುಕಿ ಅಲುಗದ ವಿಗ್ರಹವನ್ನು ಮಾಡಿಸಲು ಕುಶಲನನ್ನು ವಿಚಾರಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತುಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು ಹುಳಿತುಹೋಗದ ಮರವನ್ನು ಹುಡುಕಿ, ಬಾಗಿಬೀಳದ ವಿಗ್ರಹವನ್ನು ತಯಾರಿಸುವುದಕ್ಕೆ ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.