Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:21 - ಕನ್ನಡ ಸತ್ಯವೇದವು C.L. Bible (BSI)

21 ನಿಮಗೆ ತಿಳಿದಿಲ್ಲವೋ, ನೀವು ಕೇಳಿಲ್ಲವೋ ಆದಿಯಿಂದ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಪೃಥ್ವಿಸ್ಥಾಪನೆ ಹೇಗಾಯಿತೆಂದು ನೀವು ಗ್ರಹಿಸಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂವಿುಯು ಸ್ಥಾಪಿತವಾದಂದಿನಿಂದ ನೀವು ಗ್ರಹಿಸುತ್ತಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ವಿಷಯಗಳನ್ನೆಲ್ಲಾ ನೀವು ಸರಿಯಾಗಿ ತಿಳಿದಿದ್ದೀರಲ್ಲವೆ? ಇದರ ವಿಚಾರವಾಗಿ ನೀವು ಕೇಳಿರುವಿರಿ. ಎಷ್ಟೋ ವರ್ಷಗಳ ಹಿಂದೆ ಯಾರೋ ನಿಮಗೆ ಹೇಳಿದ್ದಿರಬಹುದು. ಖಂಡಿತವಾಗಿಯೂ ಭೂಮಿಯನ್ನು ಯಾರು ನಿರ್ಮಿಸಿದ್ದಾರೆಂದು ನೀವು ತಿಳಿದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ತಿಳಿದಿಲ್ಲವೋ? ಭೂಮಿಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:21
17 ತಿಳಿವುಗಳ ಹೋಲಿಕೆ  

ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.


ಮತಭ್ರಷ್ಟರೇ, ಜ್ಞಾಪಕದಲ್ಲಿಡಿ ಇದನ್ನು ಧೈರ್ಯದಿಂದ ಒಪ್ಪಿಕೊಳ್ಳಿ ನಿಮ್ಮ ತಪ್ಪನ್ನು.


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಅವುಗಳಂತಾಗುವರು ಅವುಗಳನು ಮಾಡುವವರು I ಅವುಗಳಂತಾಗುವರು ಅವುಗಳನು ನಂಬುವವರು II


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


ಉತ್ತರ ದಿಕ್ಕನ್ನು ವಿಸ್ತರಿಸಿಹನು ಶೂನ್ಯದ ಮೇಲೆ ಭೂಮಂಡಲವನ್ನು ತೂಗುಹಾಕಿಹನು ಏನೂ ಇಲ್ಲದರ ಮೇಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು