Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:24 - ಕನ್ನಡ ಸತ್ಯವೇದವು C.L. Bible (BSI)

24 ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರುವಾಗಲೆ ಬಾಡುವುದು ಇವರ ಸಂತಾನ ಆತನ ಶ್ವಾಸದಿಂದಲೆ; ಬಡಿದು ಹೊಯ್ಯಲ್ಪಡುವುದು ಒಣಹುಲ್ಲಿನಂತೆ ಬಿರುಗಾಳಿಯಿಂದಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂವಿುಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಒಣಹುಲ್ಲಿನಂತೆ ಅವುಗಳನ್ನು ಬಡಿದುಕೊಂಡು ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇವರು ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸವನ್ನು ಇವರ ಮೇಲೆ ಊದಿದಾಗಲೇ ಒಣಗಿ ಹೋಗುವರು. ಬಿರುಗಾಳಿಯು ಇವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:24
28 ತಿಳಿವುಗಳ ಹೋಲಿಕೆ  

ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ಸ್ವಜನರಿಗೆ ಸರ್ವೇಶ್ವರ ಪ್ರತ್ಯಕ್ಷನಾಗುವನು ಮಿಂಚಿನಂತೆ ಬಿಡುವನು ತನ್ನ ಬಾಣಗಳನು ಮೊಳಗಿಸುವನು ಕಾಳಗದ ತುತೂರಿಯನು ದಕ್ಷಿಣದ ಬಿರುಗಾಳಿಯೊಂದಿಗೆ ಮುನ್ನುಗ್ಗುವನು.


ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”


ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.


ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.”


ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಇವರು ಪ್ರಾತಃಕಾಲದ ಮೋಡದಂತೆ ಮಾಯವಾಗುತ್ತಾರೆ. ಇಬ್ಬನಿಯಂತೆ ಕರಗಿಹೋಗುತ್ತಾರೆ. ಬಿರುಗಾಳಿಗೆ ಸಿಕ್ಕಿದ ಹೊಟ್ಟಿನಂತೆ ತೂರಿಹೋಗುತ್ತಾರೆ; ಗವಾಕ್ಷಿಯ ಹೊಗೆಯಂತೆ ಗಾಳಿಯಲ್ಲಿ ತೇಲಿಹೋಗುತ್ತಾರೆ.


ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”


ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು.


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು, ಅವನ ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೆ ಕತ್ತಿಗೆ ತುತ್ತಾಗುವಂತೆ ಮಾಡುವೆನು.”


ಬೀಜವನ್ನು ನೆಟ್ಟ ದಿನವೇ ಬೇಲಿಕಟ್ಟಿದೆ. ಮಾರನೆಯ ದಿನವೇ ಅದು ಮೊಳೆಯುವಂತೆ ಮಾಡಿದೆ. ಆದರೂ ನಿನಗೆ ಸಿಗುವ ಸುಗ್ಗಿ, ವ್ಯಾಧಿ ಮತ್ತು ಅತೀವ ವ್ಯಥೆಯೇ.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಕಷ್ಟಸಂಕಟಗಳು ನಿಮಗೆ ಸಂಭವಿಸಿದಾಗ ನಿಮ್ಮನ್ನು ಕುರಿತು ನಾನೆ ನಕ್ಕು ಪರಿಹಾಸ್ಯ ಮಾಡುವೆನು.


ಹಸುರಿರಲಿ ಒಣಗಿರಲಿ, ಒಲೆ ಪಾಲಾಗಲಿ ಮುಳ್ಳಿನಂತೆ I ನಿಶ್ಯೇಷವಾಗಲಿ ದೇವಕೋಪಾಗ್ನಿಗೆ ಸಿಲುಕಿದಂತೆ II


ಅವರು ಗಾಳಿಗೆ ತೂರಿಹೋದ ಹುಲ್ಲಾದುದು ಎಷ್ಟು ಸಲ? ಬಿರುಗಾಳಿ ಕೊಚ್ಚಿಕೊಂಡುಹೋದ ಹೊಟ್ಟಾದುದು ಎಷ್ಟು ಸಲ?


ಅಂಥವರು ದೇವರ ಉಸಿರಿನಿಂದಲೆ ನಾಶವಾಗುವರು ಆತನ ಸಿಟ್ಟಿನಿಂದಲೆ ಸತ್ತುಹೋಗುವರು.


ಅನಂತರ ಅವನು ಜೆಸ್ರೀಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು’ ಒಬ್ಬನನ್ನೂ ಉಳಿಸಲಿಲ್ಲ.


ಆತನಾ ಗದರಿಕೆಗೆ, ಆತನಾ ಶ್ವಾಸಭರಕ್ಕೆ ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ ತೋರಿಬಂದಿತು ಭೂಲೋಕದ ಅಸ್ತಿವಾರ.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಮಾಡಿವರನು ದೇವಾ, ಗಾಳಿಗೆ ತೂರುವ ಹೊಟ್ಟಿನಂತೆ I ಸುಂಟರಗಾಳಿಯಲಿ ಮೇಲೇಳುವ ದೂಳೀಪಟದಂತೆ II


ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ.


ಕಲ್ಲುಕುಪ್ಪೆಯ ಮೇಲೂ ಬೇರುಗಳನ್ನು ಹೆಣೆದುಕೊಳ್ವನು ಕಲ್ಲಿನ ಸಂದಿಗೊಂದಿಗಳ ನಡುವೆ ನುಗ್ಗಬಲ್ಲನು ಅವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು