ಯೆಶಾಯ 40:26 - ಕನ್ನಡ ಸತ್ಯವೇದವು C.L. Bible (BSI)26 ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿಕೊಂಡು ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದರಿಸುತ್ತಾನಲ್ಲಾ; ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಕಾಶಮಂಡಲದ ಕಡೆಗೆ ನೋಡಿರಿ! ಆ ನಕ್ಷತ್ರಗಳನ್ನೆಲ್ಲಾ ಮಾಡಿದವರು ಯಾರು? ಆಕಾಶದಲ್ಲಿರುವ ಆ “ಸೈನ್ಯಗಳನ್ನು” ಸಿದ್ಧ ಮಾಡಿದವರು ಯಾರು? ಪ್ರತಿಯೊಂದು ನಕ್ಷತ್ರವನ್ನು ಹೆಸರೆತ್ತಿ ಕರೆಯುವವರು ಯಾರು? ಆತನು ಬಲಿಷ್ಠನೂ ಪರಾಕ್ರಮಶಾಲಿಯೂ ಆಗಿದ್ದಾನೆ. ಆದ್ದರಿಂದ ಆ ನಕ್ಷತ್ರಗಳಲ್ಲಿ ಒಂದೂ ನಾಶವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ. ಇಗೋ, ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ, ಅವುಗಳ ಸೈನ್ಯವನ್ನೆಲ್ಲಾ ಲೆಕ್ಕ ಮಾಡಿ ಹೊರಗೆ ತರುವನು. ಏಕೆಂದರೆ ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ತಪ್ಪದು. ಅಧ್ಯಾಯವನ್ನು ನೋಡಿ |