Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:27 - ಕನ್ನಡ ಸತ್ಯವೇದವು C.L. Bible (BSI)

27 ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾಕೋಬೇ, ಇಸ್ರಾಯೇಲೇ, ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ ಎಂದು ಏಕೆ ಅಂದುಕೊಳ್ಳುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾಕೋಬೇ, ಇದು ಸತ್ಯ! ಇಸ್ರೇಲೇ, ನೀನದನ್ನು ನಂಬಬೇಕು. ಹೀಗಿರಲು ನೀನು, “ಯೆಹೋವನು ನನ್ನ ನಡತೆಯನ್ನು ಗಮನಿಸುವದಿಲ್ಲ. ನನ್ನನ್ನು ಕಂಡುಹಿಡಿದು ಶಿಕ್ಷಿಸುವದಿಲ್ಲ” ಎಂದು ಹೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನನ್ನ ಮಾರ್ಗವು ಯೆಹೋವ ದೇವರಿಗೆ ಮರೆಯಾಗಿದೆ. ನನ್ನ ನ್ಯಾಯವು ನನ್ನ ದೇವರಿಂದ ದಾಟಿಹೋಯಿತಲ್ಲಾ! ಎಂದು ಯಾಕೋಬೇ ಏಕೆ ಹೇಳುತ್ತೀ? ಇಸ್ರಾಯೇಲೇ ಏಕೆ ಮಾತನಾಡುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:27
10 ತಿಳಿವುಗಳ ಹೋಲಿಕೆ  

ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.


ಜೆರುಸಲೇಮಿನ ಜನರಾದರೋ ಇಂತೆಂದರು : ಸರ್ವೇಶ್ವರ ನಮ್ಮನ್ನು ಕೈಬಿಟ್ಟಿಹನು, ಆ ಸ್ವಾಮಿ ನಮ್ಮನ್ನು ಮರೆತುಬಿಟ್ಟಿಹನು.”


“ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ.


ಇಂತಿದೆ ಯೋಬನ ವಾದ - ‘ನಾನು ಸತ್ಯವಂತ ನನಗೆ ದೇವರಿಂದ ನ್ಯಾಯ ದೊರೆತಿಲ್ಲ.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ನನಗೆ ವಿಧಿತವಾದುವುಗಳನೆ ಕಾರ್ಯಗೊಳಿಸುತ್ತಾನೆ ಈ ಪರಿಯ ಹಲವಾರು ಯೋಜನೆಗಳು ಆತನಲ್ಲಿವೆ.


“ಯಕೋಬೇ, ಇಸ್ರಯೇಲೇ, ನೆನಪಿನಲ್ಲಿಡು ಇದನ್ನು : ನೀನೆನ್ನ ದಾಸನು, ಇಸ್ರಯೇಲ್, ನಿನ್ನ ನಿರ್ಮಿಸಿದವನು ನಾನು; ನೀನೆನ್ನ ದಾಸನು, ನಿನ್ನನ್ನು ನಾನು ಮರೆತುಬಿಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು